Home » Gruhalakshmi : ಇನ್ಮುಂದೆ 3 ತಿಂಗಳಿಗೊಮ್ಮೆ ‘ಗೃಹಲಕ್ಷ್ಮಿ’ ಹಣ ಬಿಡುಗಡೆ!!

Gruhalakshmi : ಇನ್ಮುಂದೆ 3 ತಿಂಗಳಿಗೊಮ್ಮೆ ‘ಗೃಹಲಕ್ಷ್ಮಿ’ ಹಣ ಬಿಡುಗಡೆ!!

0 comments

Gruhalakshmi : ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿಯಲ್ಲಿ ಪ್ರತಿ ಮನೆ ಯಜಮಾನಿ ಬ್ಯಾಂಕ್‌ ಖಾತೆಗೆ ಪ್ರತಿ ತಿಂಗಳು 2,000 ರೂಪಾಯಿಗಳನ್ನು ಹಾಕಲಾಗುತ್ತಿದೆ. ಆದರೆ ಇನ್ನು ಮುಂದೆ ಪ್ರತಿ ತಿಂಗಳು ಹಣ ಹಾಕುವ ಬದಲು ಮೂರು ತಿಂಗಳಿಗೆ ಒಮ್ಮೆ ಗೃಹಲಕ್ಷ್ಮಿ ಹಣವನ್ನು ಮಹಿಳೆಯರ ಖಾತೆಗೆ ಜಮೆ ಮಾಡಲು ಸರ್ಕಾರ ನಿರ್ಧರಿಸಿದೆ.

ಹೌದು, ಗೃಹಲಕ್ಷ್ಮಿ ಯೋಜನೆಯಡಿ ಹಣ ತಿಂಗಳಿಗೊಮ್ಮೆ ಬಿಡುಗಡೆಯಾಗಬೇಕಾಗಿದ್ದರೂ, ಕೆಲವೊಮ್ಮೆ ತಾಂತ್ರಿಕ ಕಾರಣಗಳಿಂದಾಗಿ ಒಂದೇ ಬಾರಿ ಎರಡು ಅಥವಾ ಮೂರು ತಿಂಗಳ ಹಣವೂ ಜಮಾ ಆಗುತ್ತಿದೆ. ಈ ವಿಚಾರವಾಗಿ ಹದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಇನ್ಮುಂದೆ 3 ತಿಂಗಳಿಗೊಮ್ಮೆ ಸರ್ಕಾರದ ಗ್ಯಾರಂಟಿ ಯೋಜನೆಯಾದ ಗೃಹಲಕ್ಷ್ಮಿ ಹಣವನ್ನ ನೀಡುತ್ತೇವೆ ಎಂದು ಹೇಳಿದ್ದಾರೆ.

ಅಲ್ಲದೆ ನಾವು ಆರ್ಥಿಕವಾಗಿ ಗಟ್ಟಿಯಾಗಿ ಇದ್ದೇವೆ, ಜಿಎಸ್ ಟಿ ಕಲೆಕ್ಷನ್ ಆದರೆ ಕೇಂದ್ರದವರು ಅರ್ಧ ಹಣ ಕೊಡಬೇಕು, ಅವರು ಕೊಡುವುದು ತಡವಾಗುತ್ತದೆ. ಆದ್ದರಿಂದ ಹಣ ಹೊಂದಿಸುವುದು ತಡವಾಗುತ್ತದೆ. 3 ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ನೀಡುತ್ತೇವೆ ಎಂದರು.

You may also like