Home » ಅತಿಥಿ ಶಿಕ್ಷಕರನ್ನು ಖಾಯಂಗೊಳಿಸಲು ಸಾಧ್ಯವಿಲ್ಲ -ಸಚಿವ ಕೋಟ ಶ್ರೀನಿವಾಸ ಪೂಜಾರಿ

ಅತಿಥಿ ಶಿಕ್ಷಕರನ್ನು ಖಾಯಂಗೊಳಿಸಲು ಸಾಧ್ಯವಿಲ್ಲ -ಸಚಿವ ಕೋಟ ಶ್ರೀನಿವಾಸ ಪೂಜಾರಿ

0 comments

ಬೆಂಗಳೂರು :ಅತಿಥಿ ಶಿಕ್ಷಕರನ್ನು ಖಾಯಂಗೊಳಿಸಲು ಸಾಧ್ಯವಿಲ್ಲವೆಂದು ಸಮಾಜಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ವಿಧಾನಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಸಮಾಜಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರನ್ನು ಖಾಯಂಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಕೋರ್ಟ್ ಆದೇಶದಂತೆ ಅತಿಥಿ ಶಿಕ್ಷಕರ ಮನವಿ ಪರಿಶೀಲಿಸಿ, ಪೂರ್ಣಕಾಲಿಕ ಶಿಕ್ಷಕರಾಗಿ ಕಾಯಂಗೊಳಿಸಲು ನಿಯಮಾನುಸಾರ ಅವಕಾಶವಿರುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

You may also like

Leave a Comment