Home » SSLC ಪರೀಕ್ಷೆಗೆ ಮಾರ್ಗಸೂಚಿ ಬಿಡುಗಡೆ !! ಹಾಜರಾತಿ, ಫೀಸ್ ಬಗ್ಗೆ ಇಲ್ಲಿದೆ ಹೊಸ ಅಪ್ಡೇಟ್

SSLC ಪರೀಕ್ಷೆಗೆ ಮಾರ್ಗಸೂಚಿ ಬಿಡುಗಡೆ !! ಹಾಜರಾತಿ, ಫೀಸ್ ಬಗ್ಗೆ ಇಲ್ಲಿದೆ ಹೊಸ ಅಪ್ಡೇಟ್

0 comments

SSLC: 2026ರ ಮಾರ್ಚ್‌/ಎಪ್ರಿಲ್‌ನಲ್ಲಿ ನಡೆಯಲಿರುವ ಎಸೆಸೆಲ್ಸಿ ಪರೀಕ್ಷೆ-1ಕ್ಕೆ ವಿದ್ಯಾರ್ಥಿಗಳ ನೋಂದಣಿಗಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ‘ಶಾಲಾ ವಿದ್ಯಾರ್ಥಿ’ಗಳನ್ನು ನೋಂದಾಯಿಸಲು ಅರ್ಜಿಗಳನ್ನು ಆಹ್ವಾನಿಸಿದೆ. ಶಾಲೆಗಳ ಮುಖ್ಯ ಶಿಕ್ಷಕರು ವಿದ್ಯಾರ್ಥಿಗಳ ಮಾಡುವಂತೆ ತಿಳಿಸಿದೆ. ಪ್ರಥಮ ಬಾರಿಗೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ 710 ರೂ. ಶುಲ್ಕ ನಿಗದಿಪಡಿಸಲಾಗಿದೆ. ಬಾಲಕಿಯರು, ಪರಿಶಿಷ್ಟರು, ಆದಾಯಮಿತಿಗೆ ಒಳಪಟ್ಟು ವಿವಿಧ ಪ್ರವರ್ಗಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಪರೀಕ್ಷೆಗೆ ಹಾಜರಾಗಲು ಶೇ.75 ಹಾಜರಾತಿ ಹೊಂದಿರುವುದು ಕಡ್ಡಾಯವಾಗಿದೆ.

ಇದನ್ನೂ ಓದಿ:Pilchandi Daiva: ‘ದೈವದ ಹೆಸರಲ್ಲಿ ದುಡ್ಡು ಮಾಡಿದ್ರೆ ಆಸ್ಪತ್ರೆಗೆ ಸುರಿಸುತ್ತೇನೆ’ – ‘ಕಾಂತಾರ’ ವೀಕ್ಷಕರಿಗೆ ಎಚ್ಚರಿಕೆ ನೀಡಿದ ಪಿಲ್ಚಂಡಿ ದೈವ!!

ಎಸ್‌ಎಸ್‌ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಳ್ಳುವ ಖಾಸಗಿ, ಪುನರಾವರ್ತಿತ ಅಭ್ಯರ್ಥಿಗಳಿಗೆ ಇಲಾಖೆ ನಿಯಮ ಸರಳೀಕರಣ ಮಾಡಿದೆ. ಈ ಮೊದಲು ವಯೋಮಿತಿ ಆಧಾರದಲ್ಲಿ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬೇಕೆಂದರೆ ಅಭ್ಯರ್ಥಿಗಳು ಸಮೀಪದ ಸರ್ಕಾರಿ ಪ್ರೌಢಶಾಲೆ ಅಥವಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ನೋಂದಾಯಿಸಿಕೊಳ್ಳಬೇಕಿತ್ತು. ಈ ಬಾರಿ ಮೊಬೈಲ್ ನಲ್ಲಿ ಆನ್ಲೈನ್ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದೆ.

You may also like