Home » Harish Poonja: ಮುಸ್ಲಿಂ ಸಮುದಾಯದ ಬಗ್ಗೆ ಹರೀಶ್‌ ಪೂಂಜ ಮಾತು, ದೇವಸ್ಥಾನದ ಆಡಳಿತ ಮಂಡಳಿ ವಿಷಾದ

Harish Poonja: ಮುಸ್ಲಿಂ ಸಮುದಾಯದ ಬಗ್ಗೆ ಹರೀಶ್‌ ಪೂಂಜ ಮಾತು, ದೇವಸ್ಥಾನದ ಆಡಳಿತ ಮಂಡಳಿ ವಿಷಾದ

0 comments
Harish Poonja

Harish Poonja: ದಕ್ಷಿಣ ಕನ್ನಡ ಜಿಲ್ಲೆಯ ತೆಕ್ಕಾರಿನಲ್ಲಿ ಶಾಸಕ ಹರೀಶ್‌ ಪೂಂಜ ಮುಸ್ಲಿಂ ಸಮುದಾಯದ ಕುರಿತು ಆಡಿರುವ ಮಾತಿನ ಕುರಿತು ದೇವಸ್ಥಾನದ ಆಡಳಿತ ಮಂಡಳಿಯ ಕೆಲವರು ಮುಸ್ಲಿಂ ಮುಖಂಡರ ಜೊತೆ ಸಭೆ ನಡೆಸಿ ವಿಷಾದ ವ್ಯಕ್ತಪಡಿಸಿದ್ದಾರೆ.

ನಿಮ್ಮ ಆಹ್ವಾನದ ಮೇರೆಗೆ ಮುಸ್ಲಿಂ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆದರೆ ನಿಮ್ಮ ವೇದಿಕೆಯಲ್ಲಿ ಮುಸ್ಲಿಮರ ಕುರಿತು ಅವಹೇಳನಕಾರಿ ಭಾಷಣ ಮಾಡಿದ್ದು, ಬೇಸರ ತಂದಿದೆ. ಟ್ಯೂಬ್‌ಲೈಟ್‌ ಹಾಗೂ ಡೀಸೆಲ್‌ ಕದ್ದ ಆರೋಪದ ಕುರಿತು ಸಾಕ್ಷ್ಯ ಇಲ್ಲದೆ, ನಮ್ಮ ಸಮುದಾಯದ ಮೇಲೆ ಆರೋಪ ಮಾಡಿರುವ ಕುರಿತು ಉತ್ತರ ನೀಡಬೇಕುʼ ಎಂದು ತೆಕ್ಕಾರಿನ ಮುಸ್ಲಿಂ ಒಕ್ಕೂಟದವರು ದೇವಸ್ಥಾನದ ಆಡಳಿತ ಮಂಡಳಿಗೆ ಪತ್ರ ಬರೆದಿದ್ದರು.

ಇದಕ್ಕೆ ಸ್ಪಷ್ಟೀಕರಣ ನೀಡಲೆಂದು ದೇವಸ್ಥಾನದ ಅಧ್ಯಕ್ಷ ನಾಗಭೂಷಣ ರಾವ್‌ ಅವರ ಮನೆಯಲ್ಲಿ ಹಿಂದೂ ಮತ್ತು ಮುಸ್ಲಿಂ ಮುಖಂಡರ ಸಭೆ ನಡೆದಿದೆ. ಇದರಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಕೆಲವರು ವಿಷಾದ ವ್ಯಕ್ತಪಡಿಸಿದರು. ಅಲ್ಲದೇ ಸೌಹಾರ್ದದಿಂದ ಇರೋಣ ಎಂಬ ಪತ್ರ ಕೂಡಾ ಮುಸ್ಲಿಂ ಸಮುದಾಯದವರಿಗೆ ನೀಡಿದರು.

You may also like