Home » ಸಿಡಿಲಿನ ಅಬ್ಬರಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಸಾವು!

ಸಿಡಿಲಿನ ಅಬ್ಬರಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಸಾವು!

0 comments

ಹಾಸನ:ಕೆಲ ದಿನಗಳಿಂದ ರಾಜ್ಯದ ಹಲವೆಡೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಅಪಾರ ನಷ್ಟ ಅನುಭವಿಸಿದ್ದಲ್ಲದೆ, ಅನೇಕ ಜನರ ಪ್ರಾಣವನ್ನೇ ಹಿಂಡಿದೆ.ನಿನ್ನೆ ಹಾಸನ ಜಿಲ್ಲೆಯಲ್ಲಿ ಸಿಡಿಲಿನ ಅಬ್ಬರಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಬಲಿಯಾದ ಹೃದಯವಿದ್ರಾಯಕ ಘಟನೆ ನಡೆದಿದೆ.

ಚನ್ನರಾಯಪಟ್ಟಣ ತಾಲೂಕಿನ ಬಸವನಪುರ ಹಾಗೂ ಸಾಸಲಗೆರೆ ಗ್ರಾಮದ ಉದಯ್ ಹಾಗೂ ಮಂಜು ಸಿಡಿದು ಬಡಿದು ಸ್ಥಳದಲ್ಲೇ ಮೃತಪಟ್ಟವರು.

ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಮಳೆಯೇ ಈ ಕುಟುಂಬಗಳಿಗೆ ಶಾಪವಾಗಿ ನಿಂತಿದೆ.ನಿನ್ನೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು-ಸಿಡಿಲು ಸಹಿತ ಮಳೆಯಾಗಿದ್ದು, ಕೆಲವೆಡೆ ಅವಘಡಗಳು ಸಂಭವಿಸಿವೆ.

You may also like

Leave a Comment