1
Hassan:ಪಾಳು ಹಾಸನ ಜಿಲ್ಲೆಯ ಬೇಲೂರಿನಲ್ಲಿ ಪಾಳುಬಿದ್ದ ಕಟ್ಟಡ ಕುಸಿದುಬಿದ್ದು ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಣ್ಣು ಖರೀದಿಗೆ ಬಂದಿದ್ದ ನಜೀರ್ ಹಾಗೂ ಅಮರನಾಥ್ ಮೃತಪಟ್ಟಿದ್ದು ಮತೋರ್ವನ ಗುರುತು ಪತ್ತೆಯಾಗಿಲ್ಲ. ಇನ್ನು ಘಟನೆಯಲ್ಲಿ ಇಬ್ಬರು ಮಹಿಳೆಯರಿಗೆ ಗಂಭೀರಗಳಾಗಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ.
ಇದು ಬೇಲೂರಿನ ಸತ್ಯನಾರಾಯಣ ಎಂಬುವರಿಗೆ ಸೇರಿದ್ದ ಎಂಟು ಅಂಗಡಿಗಳಿದ್ದ ಹಳೆಯ ಕಟ್ಟಡವಾಗಿದ್ದು ಇದರಲ್ಲಿ ಅಂಗಡಿಗಳಿದ್ದವು. ಹೀಗಾಗಿ ನಜೀರ್ ಹಾಗೂ ಅಮರನಾಥ್ ಹಣ್ಣು ಖರೀದಿ ಮಾಡಲು ಬಂದಿದ್ದಾರೆ. ಈ ವೇಳೆ ಕಟ್ಟಡದ ಸಜ್ಜಾ ಕುಸಿದು ಬಿದ್ದಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಬೇಲೂರು ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.
