4
Accident: ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಬೆನಚಿನಮರಡಿ ಗ್ರಾಮದ ಹೊರವಲಯದಲ್ಲಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿಯಾಗಿ (Accident) ಮಹಿಳೆ ಮೃತಪಟ್ಟಿದ್ದು, 15ಕ್ಕೂ ಅಧಿಕ ಮಂದಿಗೆ ಗಾಯಗಳಾಗಿರುವ ಘಟನೆ ನಡೆದಿದೆ.
ಮೃತ ಮಹಿಳೆ ಕೊಳವಿ ಗ್ರಾಮದ ಯಲ್ಲವ್ವ ಬೀರನಗಡ್ಡಿ (70) ಎಂದು ತಿಳಿದು ಬಂದಿದೆ.
ಬೈಲಹೊಂಗಲ ಗೋಕಾಕ್ ಮಾರ್ಗದಲ್ಲಿ ಬಸ್ ಸಂಚರಿಸುತಿತ್ತು. ಡಿಕ್ಕಿ ರಭಸಕ್ಕೆ ಪಲ್ಟಿಯಾಗಿದ್ದ ಬಸ್ ಅಡಿ ಸಿಲುಕಿ ಮಹಿಳೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.
