2
Heart Attack: ಶಬರಿಮಲೆ ಅಯ್ಯಪ್ಪನ ದರ್ಶನ ಮುಗಿಸಿ ವಾಪಸ್ ಬರುವ ಸಂದರ್ಭದಲ್ಲಿ ಕನಕಪುರ ಮೂಲದ 18 ವರ್ಷದ ಅಯ್ಯಪ್ಪನ ಭಕ್ತನೊಬ್ಬ ಹೃದಯಾಘಾತದಿಂದ ಸಾವಿಗೀಡಾಗಿದ್ದಾನೆ.
ಪ್ರಜ್ವಲ್ (18) ಮೃತ ಯುವಕ. ಕನಕಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದ ನಿವಾಸಿ ಪ್ರಜ್ವಲ್, ಎರಡು ದಿನಗಳ ಹಿಂದೆ ತಂದೆ ಹಾಗೂ ಸ್ನೇಹಿತರ ಜೊತೆ ಅಯ್ಯಪ್ಪನ ದರ್ಶನಕ್ಕೆ ತೆರಳಿದ್ದ. ಅಯ್ಯಪ್ಪನ ದರ್ಶನ ಮುಗಿಸಿ ಬೆಟ್ಟ ಇಳಿಯುವಾಗ ಪ್ರಜ್ವಲ್‌ಗೆ ಹೃದಯಾಘಾತವಾಗಿದೆ. ಕೂಡಲೇ ಸ್ಥಳೀಯರು ಯುವಕನನ್ನು ಆಸ್ಪತ್ರೆಗೆ ಕರೆದೊಯ್ಯಿದ್ದಿದ್ದಾರೆ. ಆದರೆ ಮಾರ್ಗ ಮಧ್ಯೆ ಪ್ರಜ್ವಲ್ ಸಾವಿಗೀಡಾಗಿದ್ದಾನೆ.
ಶಬರಿಮಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ಮಾಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ, ಕನಕಪುರಕ್ಕೆ ತರುವ ವ್ಯವಸ್ಥೆ ಮಾಡಲಾಗುತ್ತಿದೆ.
