1
Heart Attack: ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನ ಕಟ್ಟಳ್ಳಿ ಗ್ರಾಮದಲ್ಲಿ 22 ವರ್ಷದ ಯುವತಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಸುಪ್ರಿಯಾ (22) ಮೃತ ಯುವತಿ. ಕಟ್ಟಳ್ಳಿ ಗ್ರಾಮದ ಕೃಷ್ಣಮೂರ್ತಿ-ರೂಪ ದಂಪತಿಯ ಪುತ್ರಿ. ಈಕೆಯ ಕುಟುಂಬದವರು ಬೆಂಗಳೂರಿನಲ್ಲಿ ವಾಸ ಮಾಡುತ್ತಿದ್ದಾರೆ.
ಸುಪ್ರಿಯಾ ವಿದ್ಯಾಭ್ಯಾಸದ ಜೊತೆಗೆ ಕೆಲಸ ಮಾಡುತ್ತಿದ್ದಳು. ನಿನ್ನೆ ಮನೆಯಲ್ಲಿದ್ದಾಗ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಪೋಷಕರಿಗೆ ಹೇಳಿದ್ದಾಳೆ, ತಕ್ಷಣವೇ ಕುಸಿದು ಬಿದ್ದಿದ್ದಾಳೆ. ಕೂಡಲೇ ಪೋಷಕರು ಸುಪ್ರಿಯಾಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಷ್ಟರಲ್ಲಿ ಸುಪ್ರಿಯಾ ಸಾವಿಗೀಡಾಗಿದ್ದಾಳೆ.
