Heatwave: ಮುಂದಿನ ಒಂದು ವಾರಗಳ ಕಾಲ ಕರ್ನಾಟಕದ ಕರಾವಳಿ, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಉಷ್ಣ ಅಲೆ ಬೀಸಲಿದ್ದು, ಬಿಸಿಲು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬಿಸಿ ಗಾಳಿಯ ಅನುಭವವಾಗಲಿದೆ.
ಚಾಮರಾಜನಗರ, ಚಿಕ್ಕಮಗಳೂರು, ಮಡಿಕೇರಿ, ಶಿವಮೊಗ್ಗ, ಮೈಸೂರು, ಮಂಡ್ಯ, ಕಾರವಾರ, ಪಣಂಬೂರು, ಮಂಗಳೂರು, ಬಾಗಲಕೋಟೆ, ಬೆಳಗಾವಿ ಚಿತ್ರದುರ್ಗ, ದಾವಣಗೆರೆ, ಚಿಂತಾಮಣಿಯಲ್ಲಿ ಗರಿಷ್ಠ ತಾಪಮಾನವಿರಲಿದೆ.
ಹಾಗಾಗಿ ಹವಾಮಾನ ಇಲಾಖೆ ಕೆಲವೊಂದು ಸಲಹೆಯನ್ನು ನೀಡಿದೆ;
ಶಿಶುಗಳು, ದುರ್ಬಲರು, ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿರುವವರು ತಮ್ಮ ಆರೋಗ್ಯದ ಕುರಿತು ಕಾಳಜಿ ವಹಿಸಬೇಕು.
ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಬಿಸಿಲಿಗೆ ಹೋಗುವುದನ್ನು ತಪ್ಪಿಸಿ.
ಹಗುರವಾದ, ತಿಳಿ ಬಣ್ಣದ, ಸಡಿಲ ಬಟ್ಟೆ ಧರಿಸಿ
ಬಾಯಾರಿಕೆ ಇಲ್ಲದಿದ್ದರೂ ಸಾಕಷ್ಟ ನೀರು ಕುಡಿಯಬೇಕು
ತಲೆಗೆ ಬಿಸಿಲ ಶಾಖ ತಾಕದಂತೆ ನೋಡಿಕೊಳ್ಳಿ
ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ, ಅವುಗಳಿಗೆ ಸಾಕಷ್ಟು ನೀರು ಕೊಡಿ
ಓಆರ್‌ಎಸ್ ಪಾನೀಯ ಅಥವಾ ಮನೆಯಲ್ಲಿ ತಯಾರು ಮಾಡಿದ ಲಸ್ಸಿ, ಅಕ್ಕಿ ನೀರು, ನಿಂಬೆ ನೀರು ಇತ್ಯಾದಿಗಳನ್ನು ನಿಮ್ಮ ದೇಹ ಹೈಡ್ರೇಟ್ ಆಗಿಡಲು ಕುಡಿಯಿರಿ.
