Home » Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ರಣಭೀಕರ ಮಳೆ – ಹವಮಾನ ಇಲಾಖೆಯಿಂದ ಅಲರ್ಟ್

Rain: ಕರ್ನಾಟಕದ ಈ ಜಿಲ್ಲೆಗಳಲ್ಲಿ ರಣಭೀಕರ ಮಳೆ – ಹವಮಾನ ಇಲಾಖೆಯಿಂದ ಅಲರ್ಟ್

0 comments

Rain: ರಾಜ್ಯದಲ್ಲಿ ಬೇಸಿಗೆಯ ಮಳೆ ಮುಂದುವರೆದಿದ್ದು ಈ ಜಿಲ್ಲೆಗಳಲ್ಲಿ ರಣಭೀಕರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಪಶ್ಚಿಮ ವಿದರ್ಭದಿಂದ ಮರಾಠವಾಡ, ಮನ್ನಾರ್ ಕೊಲ್ಲಿಯವರೆಗೆ ಕರ್ನಾಟಕದ ಒಳನಾಡು ಮತ್ತು ತಮಿಳುನಾಡಿನಾದ್ಯಂತ ಉತ್ತರ-ದಕ್ಷಿಣ ವಾಯುಭಾರವು ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ ವರೆಗೆ ವಿಸ್ತರಿಸಿದೆ. ಇದರ ಪರಿಣಾಮವಾಗಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲವು ಭಾಗದಲ್ಲಿ ಮಿಂಚು – ಗುಡುಗು ಸಹಿತ ಧಾರಾಕಾರ ಮಳೆ ಮುಂದುವರಿದಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯನಗರ ಹಾಗೂ ಗದಗನಲ್ಲೂ ಮಳೆ ಇರಲಿದೆ. ಇನ್ನು ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ದಾವಣಗೆರೆ, ಚಾಮರಾಜನಗರ, ಮಂಡ್ಯ ಹಾಗೂ ಮೈಸೂರಿನಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ. ಆದರೆ, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಅಲರ್ಟ್‌ ನೀಡಿದೆ.

You may also like