4
Rain Alert: ಶುಕ್ರವಾರ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಹನ್ನೆರಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು (ಶುಕ್ರವಾರ) ಭಾರೀ ಮಳೆಯಾಗುವ ಸಂಭವವಿದೆ. ಇನ್ನು ಎ.5 ರಂದು ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.
