Home » Udupi : ಉಡುಪಿಯಲ್ಲಿ ಭಯಂಕರ ಮಳೆ – ಅಂಗಡಿಗಳಿಗೆ ನುಗ್ಗಿತು ಕೆಸರು ನೀರು, ರಸ್ತೆಯಲ್ಲಿ ಹರಿದು ಬಂತು ಕಲ್ಲುಗಳ ರಾಶಿ

Udupi : ಉಡುಪಿಯಲ್ಲಿ ಭಯಂಕರ ಮಳೆ – ಅಂಗಡಿಗಳಿಗೆ ನುಗ್ಗಿತು ಕೆಸರು ನೀರು, ರಸ್ತೆಯಲ್ಲಿ ಹರಿದು ಬಂತು ಕಲ್ಲುಗಳ ರಾಶಿ

0 comments

Udupi : ಉಡುಪಿಯಲ್ಲಿ(Udupi) ಭಾರೀ ಮಳೆಯಾಗುತ್ತಿದ್ದು, ಅಂಗಡಿಗಳಿಗೆ ಕೆಸರು ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಜಡಿ ಮಳೆಗೆ ಜಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ. ಹೀಗಾಗಿ ಬಿರುಸಿನ ಮಳೆಯಿಂದಾಗಿ (Udupi Rains) ಉಡುಪಿ-ಮಣಿಪಾಲ ರಸ್ತೆಯಲ್ಲಿ ಮಂಗಳವಾರ ಕೃತಕ ಪ್ರವಾಹ ಸೃಷ್ಟಿಯಾಗಿದ್ದು, ಕೆಸರು, ಕಲ್ಲುಗಳ ರಾಶಿ ಹರಿದುಬಂದಿದ್ದರಿಂದ ವಾಹನ ಸವಾರರು ಹೈರಾಣಾಗಿದ್ದಾರೆ.

ಮಣಿಪಾಲದ ಐನಾಕ್ಸ್ ಬಳಿಯ ರಸ್ತೆ ಸಂಪೂರ್ಣವಾಗಿ ಮುಳುಗಿ, ನದಿಯಂತೆ ನೀರು ಹರಿದಿದ್ದು, ಕೆಸರು ನೀರಿನ ಜತೆಗೆ ಕಲ್ಲು ಮಣ್ಣು ರಸ್ತೆ ಮೇಲೆ ಹರಿದಿದೆ. ಉಡುಪಿಯ ಪ್ರಮುಖ ರಸ್ತೆಯಾಗಿರುವ ಇಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಮಳೆ ನೀರು ರಸ್ತೆ ಮೇಲೆ ಹರಿದಿದೆ ಎಂದು ಹೇಳಲಾಗಿದೆ.

ಅಲ್ಲದೆ ನಗರ ಅಪ್ಸರಾ ಐಸ್‌ಕ್ರೀಮ್ ಮಳಿಗೆಗೆ ಭಾರೀ ಮಳೆ ನೀರು ಮತ್ತು ಕೆಸರು ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಲಕ್ಷಾಂತರ ರೂ. ಫ್ರಿಡ್ಜ್, ಕೂಲರ್‌ಗಳಿಗೆ ಹಾನಿಯಾಗಿದೆ. ರಸ್ತೆ ಒತ್ತುವರಿ ಹಾಗೂ ಬಿಲ್ಡಿಂಗ್ ಪಾರ್ಕಿಂಗ್ ಒತ್ತುವರಿಯಿಂದ 14 ಫೀಟ್ ಇದ್ದ ಚರಂಡಿ ಈಗ ನಾಲ್ಕು ಅಡಿಗೆ ಇಳಿದಿದೆ. ಅವೈಜ್ಞಾನಿಕ ಚರಂಡಿ ನಿರ್ಮಾಣ ಮತ್ತು ಏಕಾಏಕಿ ಗಾಳಿ ಮಳೆ ಜೊತೆ ಕೆಸರು ಮಿಶ್ರಿತ ನೀರು ಬಂದ ಕಾರಣ ತಗ್ಗು ಪ್ರದೇಶದ ಅಂಗಡಿಗಳು ಮನೆಗಳು ಜಲಾಮಯವಾಗಿದೆ.

ಇನ್ನು ಜಿಲ್ಲೆಯ ಹಲವೆಡೆ ಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿ ದಿನಪೂರ್ತಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

You may also like