6
Mangaluru: ಭಾರತವು ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದ ಬೆನ್ನಲ್ಲೇ ರಾಜ್ಯದ ಕರಾವಳಿಯಲ್ಲಿ ಹೈಅಲರ್ಟ್ ಘೋಷಿಸಿ ಕಾರವಾರದಲ್ಲಿ ಕದಂಬ ನೌಕಾ ನೆಲೆ ಹಾಗೂ ಬಂದರಿನಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
ಕರಾವಳಿ ಕಾವಲುಪಡೆ, ಭಾರತೀಯ ತಟರಕ್ಷಕ ದಳದಿಂದ ತಪಾಸಣೆ ಹೆಚ್ಚಿಸಲಾಗಿದ್ದು ಕಾರವಾರದ ಬಂದರಿಗೆ ಬರುವ ಅನ್ಯ ದೇಶದ ಹಡುಗುಗಳಲ್ಲಿ ಚೀನಾ, ಪಾಕಿಸ್ತಾನದ ಸಿಬ್ಬಂದಿಯಿದ್ದರೂ ನಿರ್ಬಂಧ ವಿಧಿಸಲಾಗಿದೆ. ಬಂದರಿಗೆ ಬಂದ ಹಡಗಿನಲ್ಲಿ ತೀವ್ರ ತಪಾಸಣೆ, ಮೀನುಗಾರಿಕಾ ಬೋಟ್‌ಗಳನ್ನು ಸಹ ತಪಾಸಣೆ ನಡೆಸಲಾಗುತ್ತಿದೆ.
12 ನಾಟಿಕನ್ ಮೈಲೂ ದೂರದಿಂದ ಹೊರ ಹೋಗದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದ್ದು, ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳದಂತೆ ಸೂಚನೆ ನೀಡಲಾಗಿದೆ.
