9
Mangalore/Udupi: ಅಪರೇಷನ್ ಸಿಂಧೂರ್ ಕಾರ್ಯಾಚರಣೆ ಬೆನ್ನಲ್ಲೇ ರಾಜ್ಯದ ಕರಾವಳಿಯಲ್ಲಿ ಹೈಲೋರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳನ್ನು ಒಳಗೊಂಡ 324 ಕಿ.ಮೀ. ಉದ್ದ ಕರಾವಳಿ ಪ್ರದೇಶದಲ್ಲಿ ಮಂಗಳೂರು, ಮಲ್ಪೆ, ಕಾರವಾರ, ಕುಮಟಾ, ಭಟ್ಕಳ, ಹೆಜಮಾಡಿ, ಹೊನ್ನಾವರ, ಬೇಲೆಕೇರಿ ಮತ್ತು ಗಂಗೊಳ್ಳಿಯಲ್ಲಿ ಸಿಎಸ್‌ಪಿ ಕೇಂದ್ರಗಳು ಸೇರಿದೆ ಎಂದು ವರದಿಯಾಗಿದೆ.
13 ದೋಣಿಗಳು ಮತ್ತು ಜೆಟ್ ಸ್ಕೀಗಳನ್ನು ಬಳಸಿ 24/7 ಕಣ್ಗಾವಲು ಕಾರ್ಯಾಚರಣೆ ಮಾಡಲಾಗುತ್ತಿದೆ
ಒಂಬತ್ತು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ 340 ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದ್ದು, 180 ಸಿಬ್ಬಂದಿಯನ್ನು ಕರಾವಳಿ ನಿಯಂತ್ರಣ ಪಡೆಗೆ ಸೇರಿಸಲಾಗಿದೆ ಎಂದು ವರದಿಯಾಗಿದೆ.
