Home » High Court: ರಾಘವೇಶ್ವರ ಸ್ವಾಮಿಗಳ ಮೇಲಿದ್ದ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ ಹೈಕೋರ್ಟ್ !!

High Court: ರಾಘವೇಶ್ವರ ಸ್ವಾಮಿಗಳ ಮೇಲಿದ್ದ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ ಹೈಕೋರ್ಟ್ !!

0 comments

High Court : 2015ರಲ್ಲಿ ಗೋಕರ್ಣ ಶ್ರೀ ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತಿ ಸ್ವಾಮೀಜಿ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.

ಶ್ರೀರಾಮಚಂದ್ರಪುರ ಮಠ ಮತ್ತು ಬೆಂಗಳೂರಿನ ಗಿರಿನಗರದಲ್ಲಿ ತಮ್ಮ ಮೇಲೆ ರಾಘವೇಶ್ವರ ಭಾರತೀ ಸ್ವಾಮೀಜಿ ಅತ್ಯಾಚಾರ ಎಸಗಿದ್ದಾರೆ ಎಂದು 29 ಆಗಸ್ಟ್‌ 2015 ರಂದು ಸಂತ್ರಸ್ತೆಯು ಬೆಂಗಳೂರಿನ ಗಿರಿನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಇದರ ತನಿಖೆ ನಡೆಸಿದ್ದ ಸಿಐಡಿಯ ವಿಶೇಷ ತನಿಖಾ ದಳವು 7 ಸೆಪ್ಟೆಂಬರ್‌ 2018ರಂದು ವಿಚಾರಣಾಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿತ್ತು. ದೂರು ಮತ್ತು ನ್ಯಾಯಾಲಯಕ್ಕೆ ಸಲ್ಲಿಸಿರುವ ಆರೋಪ ಪಟ್ಟಿ ಹಾಗೂ ಪ್ರಕ್ರಿಯೆ ರದ್ದುಪಡಿಸಬೇಕು ಎಂದು ರಾಘವೇಶ್ವರ ಸ್ವಾಮೀಜಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಘಟನೆಯನ್ನು ವರದಿ ಮಾಡುವಲ್ಲಿ 9 ವರ್ಷಗಳ ವಿಳಂಬಕ್ಕೆ ಯಾವುದೇ ವಿವರಣೆ ಇಲ್ಲ ಎಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಕಂಡುಕೊಂಡಿದ್ದು ಅತ್ಯಾಚಾರ ಕೇಸ್ ದುರುದ್ದೇಶದಿಂದ ಕೂಡಿದ್ದು ಎಂಬ ವಾದ ಮತ್ತು ಸಾಕ್ಷ್ಯಗಳನ್ನು ಪುರಸ್ಕರಿಸಿದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ಆ ಕೇಸ್‌ ಅನ್ನು ರದ್ದುಗೊಳಿಸಿದೆ

You may also like