HighCourt: ರಾಜ್ಯದ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವುದನ್ನು ಕಡ್ಡಾಯ ಮಾಡಿ ರಾಜ್ಯ ಸರಕಾರ ಹೊರಡಿಸಿರುವ ಅಧಿಸೂಚನೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್, ನಂತರ ಕೆಲವೇ ಗಂಟೆಗಳಲ್ಲಿ ಹಿಂಪಡೆಯಿತು.
ಮಂಗಳವಾರ ಬೆಳಗ್ಗೆ ಅರ್ಜಿ ವಿಚಾರಣೆ ಮಾಡಿದ ನ್ಯಾಯಮೂರ್ತಿ ಅವರ ಏಕಸದಸ್ಯ ಪೀಠವು ಅರ್ಜಿದಾರರ ಪರ ವಕೀಲರ ಮನವಿಯಂತೆ ರಾಜ್ಯ ಸರಕಾರದ ಅಧಿಸೂಚನೆ ತಡೆಯಾಜ್ಞೆ ನೀಡಿತು. ಜೊತೆಗೆ ತಡೆಯಾಜ್ಞೆ ತೆರವಿಗೆ ಅರ್ಜಿ ಸಲ್ಲಿಸುವ ಸ್ವಾತಂತ್ರ್ಯ ಸರಕಾರ ಹೊಂದಿದೆ ಎಂದು ತಿಳಿಸಿದರು.
ಇದಾದ ಕೂಡಲೇ ಕೆಲವೇ ಗಂಟೆಯಲ್ಲಿ ಮಧ್ಯಂತರ ತಡೆಯಾಜ್ಞೆ ಆದೇಶಕ್ಕೆ ರಾಜ್ಯ ಸರಕಾರದ ತೀವ್ರ ಆಕ್ಷೇಪವನ್ನು ಪರಿಗಣಿಸಿದ ಪೀಠ, ತನ್ನ ಮಧ್ಯಂತರ ಆದೇಶವನ್ನು ಹಿಂಪಡೆಯಿತು. ನಂತರ ಮಧ್ಯಂತರ ಆದೇಶದ ಕುರಿತು ಬುಧವಾರ (ಇಂದು) ಸರಕಾರದ ಮತ್ತು ಅರ್ಜಿದಾರರ ವಿಸ್ತೃತವಾಗಿ ವಾದ-ಪ್ರತಿವಾದ ಆಲಿಸಿದ ನಂತರ ಆದೇಶ ಮಾಡಲಾಗುವುದು ಎಂದು ತಿಳಿಸಿ ವಿಚಾರಣೆ ಮುಂದೂಡಿತು.
