3
School Holiday: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಕಾರಣ ರೆಡ್ ಅಲರ್ಟ್ ಘೋಷಣೆಯಾಗಿದ್ದು, ಜಿಲ್ಲೆಯಾದ್ಯಂತ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ,ಪದವಿಪೂರ್ವ ಕಾಲೇಜುಗಳಿಗೆ ಜು.25 ರಂದು ರಜೆ ಘೋಷಣೆ ಮಾಡಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಕೂಡಾ ಭಾರೀ ಮಳೆಯಾಗುತ್ತಿರುವ ಕಾರಣ ಜುಲೈ 25 (ನಾಳೆ) ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.

