ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ನ.28 ರಂದು ಉಡುಪಿಗೆ ಭೇಟಿ ನೀಡಲಿದ್ದು, ಅಂದು ಲಕ್ಷ ಕಂಠ ಗೀತ ಪಾರಾಯಣದಲ್ಲಿ ಭಾಗವಹಿಸಲಿರುವ ಕಾರಣದಿಂದ, ಮುಂಜಾಗ್ರತೆ ಕ್ರಮವಾಗಿ ಅಂದು ಉಡುಪಿ ಮತ್ತು ನಗರ ಮತ್ತು ಸುತ್ತಮುತ್ತಲ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಉಡುಪಿ ಕೃಷ್ಣ ಮಠಕ್ಕೆ ಪ್ರಧಾಣಿ ಮೋದಿ ಭೇಟಿ ನೀಡಲಿದ್ದು, ನಂತರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಉಡುಪಿಯಲ್ಲಿ ಬೃಹತ್ ರೋಡ್ ಶೋ ನಡೆಯಲಿದ್ದು, 30000 ಕ್ಕೂ ಅಧಿಕ ಮಂದಿ ಭಾಗವಹಿಸುವ ಸಾಧ್ಯತೆ ಇರುವುದರಿಂದ, ಶಾಲಾ ಮಕ್ಕಳ ವಾಹನ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆ ಇರುವ ಕಾರಣ ಮಕ್ಕಳ ಸುರಕ್ಷತೆ ಸಾರ್ವಜನಿಕ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಉಡುಪಿ ನಗರ ಠಾಣೆ ವ್ಯಾಪ್ತಿ, ಮಲ್ಪೆ ಠಾಣಾ ವ್ಯಾಪ್ತಿ ಮತ್ತು ಮಣಿಪಾಲ್ ಠಾಣಾ ವ್ಯಾಪ್ತಿಯಲ್ಲಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನ.28 ರಂದು ರಜೆ ಘೋಷಣೆ ಮಾಡಲಾಗಿದೆ.
