Holiday : ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಿನ್ನೆ ಸಂಜೆ ಭಾರೀ ಸ್ಫೋಟ ಉಂಟಾಗಿದೆ. ಕೆಂಪು ಕೋಟೆ (Red Fort) ಬಳಿಯ ಮೆಟ್ರೋ ನಿಲ್ದಾಣದ ಗೇಟ್ ಬಳಿ ನಿಲ್ಲಿಸಿದ್ದ ಕಾರು ಸ್ಫೋಟವಾಗಿದೆ. ಹೀಗಾಗಿ ದೇಶಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಕರ್ನಾಟಕದಲ್ಲಿಯೂ ಕೂಡ ಸಿಎಂ ಸಿದ್ದರಾಮಯ್ಯ ಅವರು ಹೈ ಅಲರ್ಟ್ ಘೋಷಿಸಿದ್ದಾರೆ. ಇದರ ನಡುವೆ ಶಾಲಾ-ಕಾಲೇಜುಗಳಿಗೆ ರಜೆ ಸಿಗುತ್ತದೆಯೇ? ಎಂಬ ಪ್ರಶ್ನೆಗಳು ಎದ್ದಿವೆ.
ಯಸ್ದೆ, ಹಲಿ ಸ್ಫೋಟದ ಬೆನ್ನಲ್ಲೇ ರಾಷ್ಟ್ರ ರಾಜಧಾನಿಯಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಇತ್ತ ಮುಂಬೈನಲ್ಲೂ ಹೈಅಲರ್ಟ್ ಘೋಷಿಸಲಾಗಿದೆ. ಇದರ ಬೆನ್ನಲ್ಲೇ ಬೆಂಗಳೂರು ಹಾಗೂ ಕರ್ನಾಟಕದಾದ್ಯಂತ ಹೈ ಅಲರ್ಟ್ ಘೋಷಿಲಾಗಿದೆ. ರಾಜ್ಯಾದ್ಯಂತ ಹೈ ಅಲರ್ಟ್ ಇರುವಂತೆ ಡಿಜಿ& ಐಜಿಪಿ ಸೂಚಿಸಿದ್ದಾರೆ. ಇದರ ನಡುವೆ ಶಾಲಾ-ಕಾಲೇಜುಗಳಿಗೆ ರಜೆಯನ್ನು ನೀಡಲಾಗಿದೆ ಎಂಬ ಗೊಂದಲ ಅನೇಕರಲ್ಲಿ ಮೂಡಿದೆ. ಆದರೆ ರಾಜ್ಯ ಸರ್ಕಾರ ರಾಜ್ಯಾದ್ಯಂತ ಹೈ ಅಲರ್ಟ್ ಘೋಷಿಸಿದೆಯೇ ಹೊರತು ಯಾವುದೇ ರಜೆಯನ್ನು ಘೋಷಣೆ ಮಾಡಿಲ್ಲ. ಹೀಗಾಗಿ ಪೋಷಕರಾಗಲಿ, ಮಕ್ಕಳಾಗಲಿ ಯಾವುದೇ ರೀತಿಯ ಗೊಂದಲಕ್ಕೆ ಒಳಗಾಗುವುದು ಬೇಡ.
