Home » Dharmasthala: ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನ!

Dharmasthala: ಧರ್ಮಸ್ಥಳ: ಪಾದಯಾತ್ರಿಗಳಿಗೆ ಸನ್ಮಾನ!

by ಕಾವ್ಯ ವಾಣಿ
0 comments

Dharmasthala: ಫೆ. 25 ರಂದು ಧರ್ಮಸ್ಥಳದಲ್ಲಿ (Dharmasthala) ಪ್ರವಚನಮಂಟಪದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಶಿವರಾತ್ರಿ ಜಾಗರಣೆಗೆ ಪಾದಯಾತ್ರೆಯಲ್ಲಿ ಬಂದ ಭಕ್ತಾದಿಗಳಿಗೆ ಶುಭಹಾರೈಸಿ, ಆಶೀರ್ವದಿಸಿದರು. ಜೊತೆಗೆ ಪರಿಶುದ್ಧವಾದ ಭಕ್ತಿ ಮತ್ತು ದೃಢನಂಬಿಕೆಯಿಂದ ನಮ್ಮ ಎಲ್ಲಾ ಲೌಕಿಕ ಕಷ್ಟಗಳು, ಸಮಸ್ಯೆಗಳು ಪರಿಹಾರವಾಗಿ ನಾವು ದೇವರ ಅನುಗ್ರಹಕ್ಕೆ ಪಾತ್ರರಾಗುತ್ತೇವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ದೇವರಲ್ಲಿ ಭಕ್ತಿ ಮತ್ತು ನಂಬಿಕೆಯಲ್ಲಿ ಯಾವುದೇ ರೀತಿಯ ಭಯ, ಸಂಶಯ ಇರಬಾರದು. ನಾವು ಕೊಂಚ ತಪ್ಪಿದರೂ ದೇವರು ನಮ್ಮ ರಕ್ಷಣೆ ಮಾಡುತ್ತಾರೆ. ನಂಬಿಕೆಗಳು ಮತ್ತು ವಿಶ್ವಾಸದಿಂದ ನಮ್ಮ ದೋಷಗಳ ದಮನವಾಗುತ್ತದೆ. ಭಕ್ತಿಯಲ್ಲಿ ದೈಹಿಕ ಶಕ್ತಿಗಿಂತಲೂ ಮಾನಸಿಕ ಶಕ್ತಿ, ಸಂಕಲ್ಪ ಮಿಗಿಲಾದುದು. ಮಾತೇ ಮಾಣಿಕ್ಯವಾಗಬೇಕು. ಎಲ್ಲಗೂ ಸತ್ಯ, ಧರ್ಮ, ನ್ಯಾಯ, ನೀತಿಯ ಮಾರ್ಗದಲ್ಲಿ ನಡೆದಾಗ ಜೀವನ ಪಾವನಾಗುತ್ತದೆ.

ನಂಬಿದವರಿಗೆ ಇಂಬು ಕೊಡುವ ಧರ್ಮಸ್ಥಳದಲ್ಲಿ ಸತ್ಯ ಮತ್ತು ನ್ಯಾಯಮಾರ್ಗದಲ್ಲಿ ನಡೆದರೆ ಅವರಿಗೆ ದೇವರ ಪೂರ್ಣ ಅನುಗ್ರಹವಿರುತ್ತದೆ. ತ್ಯಾಗ ಮಾಡುವುದರಿಂದ ನಾವು ಶಾಶ್ವತ ಸುಖ ಶಾಂತಿ, ನೆಮ್ಮದಿ ಪಡೆಯಬಹುದು ಎಂದು ಹೆಗ್ಗಡೆಯವರು ಹೇಳಿ, ಯಾತ್ರಿಗಳಿಗೆ ಶುಭ ಹಾರೈಸಿದರು.

You may also like