Home » ಹಾಸ್ಟೆಲ್‌ನಲ್ಲಿ ಉಪ್ಪಿಟ್ಟಿಗೆ ಬಿದ್ದ ಹಾವಿನ‌ ಮರಿ | ಉಪ್ಪಿಟ್ಟು ಸೇವಿಸಿದ 52 ವಿದ್ಯಾರ್ಥಿಗಳು ಅಸ್ವಸ್ಥ

ಹಾಸ್ಟೆಲ್‌ನಲ್ಲಿ ಉಪ್ಪಿಟ್ಟಿಗೆ ಬಿದ್ದ ಹಾವಿನ‌ ಮರಿ | ಉಪ್ಪಿಟ್ಟು ಸೇವಿಸಿದ 52 ವಿದ್ಯಾರ್ಥಿಗಳು ಅಸ್ವಸ್ಥ

by Praveen Chennavara
0 comments

ಉಪಹಾರ ಮಾಡುವಾಗ ಹಾವು ಬಿದ್ದ ಪರಿಣಾಮ ಅದನ್ನು ಸೇವಿಸಿ 52 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ಯಾದಗಿರಿ ಜಿಲ್ಲೆಯ ಯಾದಗಿರಿ ತಾಲೂಕಿನ ಅಬ್ಬೆತುಮಕೂರನ ವಿಶ್ವರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯಲ್ಲಿ ನಡೆದಿದೆ.

ಗುರುವಾರ ಬೆಳಿಗ್ಗೆ ಉಪಹಾರಕ್ಕೆ ಉಪ್ಪಿಟ್ಟು ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಇನ್ನು ಉಪಹಾರದಲ್ಲಿ ಸತ್ತ ಹಾವಿನ ಮರಿ ಪತ್ತೆಯಾಗಿದೆ. ಇತ್ತ ಹಾವಿನ ಮರಿ ಪತ್ತೆಯಾದ ನಂತರ ವಿದ್ಯಾರ್ಥಿಗಳು ಇನ್ನು ಹೆಚ್ಚು ಆತಂಕಗೊಂಡಿದ್ದಾರೆ.

ಅಸ್ವಸ್ಥಗೊಂಡ 52 ವಿದ್ಯಾರ್ಥಿಗಳಿಗೆ ಮುದ್ನಾಳ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಹೆಚ್ಚಿನ ಚಿಕಿತ್ಸೆ ಪಡೆಯಲು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆಸ್ಪತ್ರೆಗೆ ಟಿಹೆಚ್ಓ ಹಣಮಂತ ರೆಡ್ಡಿ ಅವರು ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದ್ದಾರೆ.

You may also like

Leave a Comment