Home » Bengaluru: ಬಿಸಿಗಾಳಿ ವಾತಾವರಣ: ಆರೋಗ್ಯ ಇಲಾಖೆಯಿಂದ ಗೈಡ್ ಲೈನ್ಸ್ ಪ್ರಕಟ

Bengaluru: ಬಿಸಿಗಾಳಿ ವಾತಾವರಣ: ಆರೋಗ್ಯ ಇಲಾಖೆಯಿಂದ ಗೈಡ್ ಲೈನ್ಸ್ ಪ್ರಕಟ

by ಕಾವ್ಯ ವಾಣಿ
0 comments
Weather Update

Bengaluru: ರಾಜ್ಯದಲ್ಲಿ ಬೇಸಿಗೆಯ ಸೆಕೆ ಜೊತೆಗೆ ಬಿಸಿಗಾಳಿ ವಾತಾವರಣ ಹಿನ್ನಲೆಯಲ್ಲಿ ಸಾರ್ವಜನಿಕರು ಕೆಲ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಆರೋಗ್ಯ ಇಲಾಖೆ ಸಲಹೆ ಮಾಡಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು, ಬಿಸಿಯಾದ ಗಾಳಿ, ಶಾಖ ತರಂಗದ ಸಮಯದಲ್ಲಿ ಈ ಕೆಳಕಂಡ ಸಲಹೆಯನ್ನು ಪಾಲಿಸುವಂತೆ ತಿಳಿಸಿದೆ.

ಹೆಚ್ಚು ನೀರು ಕುಡಿಯುವುದು.

ಶರೀರವನ್ನು ಸುರಕ್ಷಿತವಾಗಿಟ್ಟುಕೊಳ್ಳುವುದು.

ಸದಾ ಎಚ್ಚರದಿಂದಿರಿ.

ಸಾಧ್ಯವಾದಷ್ಟು ಒಳಾಂಗಣದಲ್ಲಿರಿ.

ಹೊರಾಂಗಣ ಚಟುವಟಿಕೆಗಳ ಸಂದರ್ಭದಲ್ಲಿ.

> ಸಾರ್ವಜನಿಕರಿಗೆ ಬಿಸಿಲಿನಿಂದ ರಕ್ಷಣೆಯನ್ನು ನೀಡಲು ಅಗತ್ಯ ಶಾಮಿಯಾನ/ಪೆಂಡಾಲ್‌ನ ವ್ಯವಸ್ಥೆ ಮಾಡುವುದು.

> ಉತ್ತಮ ಗಾಳಿಯ (Air circulation) ವ್ಯವಸ್ಥೆಯನ್ನು ಖಚಿತಪಡಿಸಿಕೊಳ್ಳುವುದು.

> ಸಭಿಕರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡುವುದು.

ತಂಪಾದ ವಾತಾವರಣವಿರುವ ಪ್ರದೇಶದಿಂದ ಬಿಸಿಯಾದ ವಾತಾವರಣದ ಪ್ರದೇಶಕ್ಕೆ ಭೇಟಿ ನೀಡುವ ಜನರು: ಬಿಸಿ ಗಾಳಿಯಸಂದರ್ಭದಲ್ಲಿ ಸುಮಾರು ಒಂದು ವಾರದ ಅವಧಿಯನ್ನು ಹೊಸ ವಾತಾವರಣಕ್ಕೆ ಒಗ್ಗಿಕೊಳ್ಳಲು (acclimatized) ಮೀಸುಡಬೇಕು ಹಾಗೂ ಈ ಅವಧಿಯಲ್ಲಿ ಹೆಚ್ಚು ನೀರನ್ನು ಸೇವಿಸಬೇಕು. ಹಂತ ಹಂತವಾಗಿ ಬಿಸಿಯಾದ ವಾತಾವರಣದಲ್ಲಿ ಚಟುವಟಿಕೆಗಳನ್ನು ನಡೆಸುವುದರಿಂದ ಒಗ್ಗಿಕೊಳ್ಳಲು ಸಾಧ್ಯವಾಗುತ್ತದೆ.

ಇತರ ಮುನ್ನೆಚ್ಚರಿಕಾ ಕ್ರಮಗಳು:

ಮನೆಯ ಒಳಾಂಗಣವನ್ನು ತಣ್ಣಗಿರಿಸಲು ಪರದೆಗಳು / ಷಟರ್ ಗಳನ್ನು ಬಳಸಿ ಹಾಗೂ ರಾತ್ರಿಯ ಸಮಯದಲ್ಲಿ ಕಿಟಕಿಗಳನ್ನು ತೆರೆದಿಡಿ. ಹಗಲು ಹೊತ್ತಿನಲ್ಲಿ ಮನೆಯ ಕೆಳಗಿನ ಮಹಡಿಗಳಲ್ಲಿರುವುದು ಉತ್ತಮ.

You may also like