Home » H C Mahadevappa: KRS ಕಟ್ಟಿದ್ದು ಟಿಪ್ಪು ಅಂತ ನಾನು ಎಲ್ಲಿಯೂ ಹೇಳಿಲ್ಲ- ಸಚಿವ ಮಹಾದೇವಪ್ಪ ಯೂ ಟರ್ನ್

H C Mahadevappa: KRS ಕಟ್ಟಿದ್ದು ಟಿಪ್ಪು ಅಂತ ನಾನು ಎಲ್ಲಿಯೂ ಹೇಳಿಲ್ಲ- ಸಚಿವ ಮಹಾದೇವಪ್ಪ ಯೂ ಟರ್ನ್

0 comments

H C Mahadevappa: ಕೆ ಆರ್ ಎಸ್ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್ ಎಂದು ತನ್ನ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದಂತೆ ಲೋಕೋಪಯೋಗಿ ಸಚಿವ ಎಚ್.ಸಿ ಮಹಾದೇವಪ್ಪ ಯೂ ಟರ್ನ್ ಹೊಡೆದಿದ್ದಾರೆ.

ಈ ಕುರಿತಾಗಿ ಮಾತನಾಡಿದವರು ಅವರು ಡ್ಯಾಂ ಕಟ್ಟಲು ಪ್ರಾರಂಭಿಸಿದಾಗ ಅಲ್ಲೊಂದು ಶಿಲಾ ಶಾಸನ ಸಿಕ್ಕಿತ್ತು. 1794ರಲ್ಲಿ ಟಿಪ್ಪು ಕಾಲದಲ್ಲಿ ಬರೆದ ಪರ್ಷಿಯನ್ ಭಾಷೆಯ ಶಿಲಾ ಶಾಸನ. ಅದರಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ಕಟ್ಟಬೇಕು ಎಂಬ ಪ್ರಸ್ತಾಪ ಇದೆ. ಅದನ್ನೂ ಕೂಡ ಕೆಆರ್‌ಎಸ್‌ನಲ್ಲಿಯೇ ಇಡಲಾಗಿದೆ. ನಾನು ಎಲ್ಲಿಯೂ ಕೂಡ ಟಿಪ್ಪು ಡ್ಯಾಂ ಕಟ್ಟಿದ್ದ ಅಂತ ಹೇಳಿಯೇ ಇಲ್ಲ. ಕೆಆರ್ ಎಸ್ ಜಲಾಶಯವನ್ನು ಟಿಪ್ಪು ಕಟ್ಟಿದ್ದು ಅಲ್ಲವೇ ಅಲ್ಲ, ಆದರೆ ಟಿಪ್ಪುಗೂ ಕೂಡ ಅದೇ ರೀತಿಯ ಕನಸು ಇತ್ತು ಎಂಬುದಷ್ಟೇ ಹೇಳಿದ್ದು. ಇದರ ನೈಜತೆಯ ಬಗ್ಗೆ ಇತಿಹಾಸಕಾರರು ಹೇಳಬೇಕು. ಕೆಆರ್‌ಎಸ್ ಡ್ಯಾಂ ಕಟ್ಟಿದ್ದು ನಮ್ಮ ಇಂಜಿನಿಯರ್‌ಗಳು ಎಂದಿದ್ದಾರೆ.

ಅಲ್ಲದೆ ಕಾವೇರಿ ನದಿಗೆ ಅಣೆಕಟ್ಟು ನಿರ್ಮಾಣ ಮಾಡುವುದಕ್ಕೆ ಸಂಬಂಧಿಸಿದಂತೆ ಟಿಪ್ಪು ಸುಲ್ತಾನ್ ಅವರಿಗಿದ್ದ ಆಲೋಚನೆಯನ್ನು ಶಾಸನ ರೂಪದಲ್ಲಿ ಕೆಆರ್‌ಎಸ್‍ನಲ್ಲೇ ಹಾಕಲಾಗಿದೆ. ಆ ಫಲಕವನ್ನು ಹಾಕಿದ್ದು ಅಂದಿನ ಅರಸರ ಕಾಲದಲ್ಲೇ ಹೊರತು ಕಾಂಗ್ರೆಸ್ ಸರಕಾರ ಅಲ್ಲ ಎಂಬ ಸಣ್ಣ ಜ್ಞಾನ ಇಲ್ಲದೇ ಬಿಜೆಪಿಗರು ವರ್ತಿಸುತ್ತಿರುವುದು ಹಾಸ್ಯಾಸ್ಪದ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿರುಗೇಟು ನೀಡಿದ್ದಾರೆ.

ಇದನ್ನು ಓದಿ: Russia Oil: ನಮಗೆ ನ್ಯಾಯಯುತ ಜಾಗತಿಕ ವ್ಯವಸ್ಥೆ ಬೇಕು – ಕೆಲವರ ಪ್ರಾಬಲ್ಯವಲ್ಲ – ಟ್ರಂಪ್ ಅವರ ಸುಂಕ ಬೆದರಿಕೆಗಳ ನಡುವೆ ಜೈಶಂಕ‌ರ್

You may also like