Pilchandi Daiva: ಕಾಂತರಾ ಚಾಪ್ಟರ್ 1 ವಿಶ್ವದಾದ್ಯಂತ ರಿಲೀಸ್ ಆಗಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕನ್ನಡದ ಚಿತ್ರವೊಂದು ವಿಶ್ವಖ್ಯಾತಿಗಳಿಸಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಜೊತೆಗೆ ಕರಾವಳಿಯ ಜಾನಪದ ಯ ಕಲೆ ಇಡೀ ವಿಶ್ವಕ್ಕೆ ಪರಿಚಯವಾಗುತ್ತಿದೆ. ಈ ನಡುವೆ ಕರಾವಳಿಯಲ್ಲಿ ದೈವ ಒಂದು ನುಡಿದ ವಾಣಿ ಸಾಕಷ್ಟು ಸುದ್ದಿಯಾಗುತ್ತಿದೆ.
ಹೌದು, ದೈವದ ವೇಷ, ಹಾಕೋದು ದೈವ ಆವಾಹನೆಯಾದಂತೆ ನಟಿಸೋ ಹುಚ್ಚು ಪ್ರೇಕ್ಷಕರು ಕಾಂತಾರಾ ಚಿತ್ರ ತಂಡಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದಾರೆ. ಈ ರೀತಿ ಮಾಡಿದರೆ ಅದು ದೈವಗಳಿಗೆ ಅವಮಾನ ಮಾಡಿದಂತೆ. ಹೀಗೆ ಹುಚ್ಚಾಟ ಆಡುವವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಸಿನಿಮಾ ತಂಡ ಎಚ್ಚರಿಕೆ ನೀಡಿದೆ. ಇದರ ಬೆನ್ನಲ್ಲೇ ಇಂತಹ ಕಿಡಿಗೇಡಿಗಳಿಗೆ ಇದೀಗ ದೈವವೂ ಕೂಡ ಎಚ್ಚರಿಕೆ ನೀಡಿದೆ.
ಇದನ್ನೂ ಓದಿ:India: ಭಾರತದಲ್ಲಿ 9 ಬ್ರಿಟಿಷ್ ವಿವಿ ಕ್ಯಾಂಪಸ್‌ಗಳ ಸ್ಥಾಪನೆ: ಬ್ರಿಟನ್ ಪ್ರಧಾನಿ ಘೋಷಣೆ
‘ಕಾಂತಾರ’ ಚಿತ್ರದ ವಿರುದ್ಧ ದೈವದ ಅಪಹಾಸ್ಯದ ಆರೋಪದ ಹಿನ್ನೆಲೆಯಲ್ಲಿ, ಕೆಲವು ದೈವಾರಾಧಕರು ಪಿಲ್ಚಂಡಿ ದೈವದ ಎದುರು ತಮ್ಮ ಅಳಲು ತೋಡಿಕೊಂಡಿದ್ದಾರೆ. ಈ ವೇಳೆ ‘ನಾನು ನಿಮ್ಮ ಹಿಂದಿದ್ದೇನೆ, ನಿಮ್ಮ ಹೋರಾಟ ಮುಂದುವರೆಸಿ. ಹುಚ್ಚು ಕಟ್ಟಿದವರ ಹುಚ್ಚು ಹಿಡಿಸುತ್ತೇನೆ’ ಎಂದು ಹೇಳುವ ಮೂಲಕ ಎಚ್ಚರಿಕೆಯನ್ನೂ ನೀಡಿದೆ. ಅಷ್ಟೇ ಅಲ್ಲದೆ ದೈವದ ಹೆಸರಿನಲ್ಲಿ ಮಾಡಿದ ದುಡ್ಡನ್ನು (ಆದಾಯವನ್ನು) ಆಸ್ಪತ್ರೆಗೆ ಸುರಿಸುವಂತೆ ಮಾಡುತ್ತೇನೆ ಎಂದೂ ಹೇಳಿದೆ.
