Home » Uppinangady: ಉಪ್ಪಿನಂಗಡಿ: ಅಕ್ರಮ ದನ ಸಾಗಾಟ ಪತ್ತೆ: ನಾಲ್ಕು ಜಾನುವಾರುಗಳ ರಕ್ಷಣೆ!

Uppinangady: ಉಪ್ಪಿನಂಗಡಿ: ಅಕ್ರಮ ದನ ಸಾಗಾಟ ಪತ್ತೆ: ನಾಲ್ಕು ಜಾನುವಾರುಗಳ ರಕ್ಷಣೆ!

0 comments

Uppinangady: ಗೂಡ್ಸ್‌ ವಾಹನದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಜಾನವಾರುಗಳನ್ನು ಉಪ್ಪಿನಂಗಡಿ (Uppinangady) ಪೊಲೀಸರು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಉರುವಾಲು ಗ್ರಾಮದ ಕುಪ್ಪೆಟ್ಟಿ ಎಂಬಲ್ಲಿ ನಡೆದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನ ಚಾಲಕ ಜಯಂತ್ ಗೌಡ ಎಂಬಾತನನ್ನು ಬಂಧಿಸಿ, ನಾಲ್ಕು ಜಾನುವಾರುಗಳನ್ನು ರಕ್ಷಿಸಿದ್ದಾರೆ.

ಬಂಧಿತ ಜಯಂತ್ ಗೌಡ ಕುಪ್ಪೆಟ್ಟಿಯ ಬದ್ರುದ್ದೀನ್ ಎಂಬಾತನಿಗೆ ಜಾನುವಾರುಗಳನ್ನು ಸಾಗಿಸುತ್ತಿದ್ದ ಎನ್ನಲಾಗಿದ್ದು, ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಪರಿಶೀಲನೆ ನಡೆಸಿದಾಗ ಅದರಲ್ಲಿ ದಾಖಲೆ ಇಲ್ಲದೆ ಸಾಗಾಟ ಮಾಡಲಾಗುತ್ತಿದ್ದ ನಾಲ್ಕು ಜಾನುವಾರುಗಳು ಪತ್ತೆಯಾಗಿದ್ದು, ಘಟನೆಗೆ ಸಂಬಂಧಿಸಿ ಮೂವರ ವಿರುದ್ಧ ಕೇಸು ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

You may also like