Home » ಕೆನಡಾ ದೇಶದ ಸಂಸತ್ತಿನಲ್ಲಿ ಕನ್ನಡದ ಕಂಪು! ಪರ ದೇಶದ ಸಂಸತ್ತಿನಲ್ಲಿ ಕನ್ನಡ ಮಾತನಾಡಿದ ಕನ್ನಡಿಗ

ಕೆನಡಾ ದೇಶದ ಸಂಸತ್ತಿನಲ್ಲಿ ಕನ್ನಡದ ಕಂಪು! ಪರ ದೇಶದ ಸಂಸತ್ತಿನಲ್ಲಿ ಕನ್ನಡ ಮಾತನಾಡಿದ ಕನ್ನಡಿಗ

0 comments

ಕೆನಡಾದ ಸಂಸತ್ತಿನಲ್ಲಿ ಕನ್ನಡ ಮಾತು ಕೇಳಿಬಂದಿದೆ. ಕೆನಡಾದ ಪಾರ್ಲಿಮೆಂಟ್​ನಲ್ಲಿ ಸಂಸದರಾಗಿರುವ ಕನ್ನಡಿಗ ಚಂದ್ರ ಆರ್ಯ ಅವರು ನಾನು ನನ್ನ ಮಾತೃಭಾಷೆಯಲ್ಲಿ ಮಾತನಾಡುತ್ತೇನೆ ಎಂದು ಅಪ್ಪಟ ಕನ್ನಡದಲ್ಲಿ ಮಾತುಗಳನ್ನು ಆರಂಭಿಸಿದ್ದಾರೆ. ಕೆನಡಾ ಪಾರ್ಲಿಮೆಂಟ್​ನಲ್ಲಿ ಇದೇ ಮೊದಲ ಬಾರಿ ಕನ್ನಡ ಮಾತನಾಡಿದ್ದಾರೆ. 

ಕೆನಡಾ ಸಂಸತ್ ಸದಸ್ಯರಾಗಿ ಆಯ್ಕೆಯಾಗಿರುವ ಚಂದ್ರ ಆರ್ಯ ಹೆಮ್ಮೆಯಿಂದ ಕನ್ನಡದಲ್ಲಿ ಮಾತನಾಡುವ ವಿಡಿಯೋ, ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸುವ ವಿಡಿಯೋ ಈಗ ವೈರಲ್ ಆಗುತ್ತಿದ್ದು ಕನ್ನಡಿಗರಿಗೆ ಹೆಮ್ಮೆ ತಂದಿದೆ.

ಮಾನ್ಯ ಸಭಾಪತಿ, ಕೆನಡಾ ದೇಶದ ಸಂಸತ್ತಿನಲ್ಲಿ ನನ್ನ ಮಾತೃ ಭಾಷೆ ಕನ್ನಡದಲ್ಲಿ ಮಾತನಾಡಲು ಅವಕಾಶ ಸಿಕ್ಕಿರುವುದಕ್ಕೆ ನನಗೆ ಸಂತೋಷವಾಗುತ್ತಿದೆ. ಭಾರತ ದೇಶದ ಕರ್ನಾಟಕ ರಾಜ್ಯದ ತುಮಕೂರು ಜಿಲ್ಲೆಯ ಸಿರಾ ತಾಲೂಕಿನ ವ್ಯಕ್ತಿಯೊಬ್ಬ ಕೆನಡಾ ಸಂಸತ್ ಸದಸ್ಯನಾಗಿ ಆಯ್ಕೆಯಾಗಿ ಕನ್ನಡದಲ್ಲಿ ಮಾತನಾಡುತ್ತಿರುವುದು ಸುಮಾರು 5 ಕೋಟಿ ಕನ್ನಡಿಗರಿಗೆ ಹೆಮ್ಮೆಯ ವಿಚಾರವಾಗಿದೆ.

ಒಟ್ಟಾವಾ: ಭಾರತೀಯರು ಅದರಲ್ಲೂ ಕನ್ನಡಿಗರೊಬ್ಬರು ದೂರದ ಕೆನಡಾ ದೇಶದಲ್ಲಿ ಸಂಸದ ರಾಗಿ ಆಯ್ಕೆಯಾಗಿರೋದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ಅಂತಹದ್ರಲ್ಲಿ ಅದೇ ಕೆನಡಾ ದೇಶದ ಸಂಸತ್ತಿನಲ್ಲಿ ನಮ್ಮ ಮಾತೃಭಾಷೆ ಕನ್ನಡ ಭಾಷೆಯಲ್ಲೇ ಮಾತನಾಡುವ ಮೂಲಕ ಚಂದ್ರ ಆರ್ಯ ಅವರು ಕನ್ನಡ ನಾಡು, ಕನ್ನಡ ಭಾಷೆ, ಕನ್ನಡಿಗರ ಮೇಲಿನ ತಮ್ಮ ಪ್ರೀತಿ ಅಭಿಮಾನವನ್ನು ವ್ಯಕ್ತಪಡಿಸಿದ್ದಾರೆ.

ಚಂದ್ರ ಆರ್ಯ ಅವರು ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಗ್ರಾಮದವರು. ಇವರು ಕೆನಡಾ ದೇಶದ ಸಂಸದರಾಗಿ ಆಯ್ಕೆಯಾಗಿ ಅತ್ಯುತ್ತಮ ಕೆಲಸ ನಿವರ್ಹಿಸುತ್ತಿದ್ದಾರೆ. ಚಂದ್ರಆರ್ಯ ಅವರು ಕೆನಡಾದಲ್ಲಿ ಮೂರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದಾರೆ. ಕೆನಡಾ ದೇಶದ ಸಂಸತ್ತಿನಲ್ಲಿ ಮಾತನಾಡುವಾಗ ತಮ್ಮ ಮಾತೃಭಾಷೆ ಕನ್ನಡದಲ್ಲೇ ಮಾತನಾಡುವ ಮೂಲಕ ಚಂದ್ರ ಆರ್ಯ ಅವರು ಎಲ್ಲರ ಗಮನ ಸೆಳೆದಿದ್ದಾರೆ.

You may also like

Leave a Comment