Home » Heavy Rain: ನಿಲ್ಲದ ವರುಣಾರ್ಭಟ: ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವು ಕಡೆ ಶಾಲೆಗಳಿಗೆ ರಜೆ

Heavy Rain: ನಿಲ್ಲದ ವರುಣಾರ್ಭಟ: ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವು ಕಡೆ ಶಾಲೆಗಳಿಗೆ ರಜೆ

by Mallika
0 comments

Heavy Rain: ಮುಂಗಾರು ಮಳೆ ರಾಜ್ಯದಲ್ಲಿ ಅಬ್ಬರಿಸುತ್ತಿದ್ದು, ಭಾರೀ ಮಳೆಯ ನಿರಂತರ ಸುರಿಯುವಿಕೆಯಿಂದ ಹಲವು ಕಡೆ ಶಾಲೆಗಳಿಗೆ ರಜೆ ನೀಡಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಹೆಚ್ಚುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಭದ್ರಾವತಿ, ಸಾಗರ, ಹೊಸನಗರ ತಾಲೂಕಿನಾದ್ಯಂತ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಇಂದು (ಜು 04) ಶುಕ್ರವಾರ ರಜೆ ಘೋಷಣೆ ಮಾಡಲಾಗಿದೆ.

ಮುಂದಿನ ರಜೆಯ ದಿನದಲ್ಲಿ ಸದರಿ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಸರಿಹೊಂದಿಸಿಕೊಳ್ಳಲು ಶಾಲಾ ಮುಖ್ಯಸ್ಥರಿಗೆ ತಿಳಿಸಲಾಗಿದ.ೆ

ಚಿಕ್ಕಮಗಳೂರು ಜಿಲ್ಲೆಯ ಆರು ತಾಲೂಕಿನಲ್ಲಿ ರಜೆ ಘೋಷಣೆ ಮಾಡಲಾಗಿದೆ. ಚಿಕ್ಕಮಗಳೂರು, ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್‌.ಆರ್‌.ಪುರ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಕೂಡಾ ನಿರಂತರ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಶಿರಸಿ, ಜೋಯಿಡಾ, ಸಿದ್ದಾಪುರ ತಾಲೂಕಿನ ಶಾಲೆಗಳಿಗೆ ರಜೆ ನೀಡಲಾಗಿದೆ.

ಇದನ್ನೂ ಓದಿ: Puttur: ಪುತ್ತೂರು: ದೈಹಿಕ ಸಂಪರ್ಕ ಬೆಳೆಸಿ ವಂಚನೆ: ಸಂತ್ರಸ್ತೆಯ ಮನೆಗೆ ಭೇಟಿ ನೀಡಿ ಕಾನೂನಿನ ನೆರವನ್ನು ಕಲ್ಪಿಸುತ್ತೇನೆ ಎಂಬುದಾಗಿ ಭರವಸೆ: ಪ್ರತಿಭಾ ಕುಳಾಯಿ

You may also like