3
ಸ್ವಾತಂತ್ರ್ಯ ದಿನದ ಅಮೃತ ಮಹೋತ್ಸವದ ಸಂದರ್ಭದಲ್ಲಿ ದುರಂತವೊಂದು ನಡೆದಿದ್ದು, ಶಾಲೆಯಲ್ಲಿ ಧ್ವಜಸ್ತಂಭ ನಿಲ್ಲಿಸುವ ವೇಳೆ ಮೂವರು ಬಾಲಕರಿಗೆ ವಿದ್ಯುತ್ ಪ್ರವಹಿಸಿ, ಓರ್ವ ಮೃತಪಟ್ಟ ಘಟನೆ ತುಮಕೂರಿನ ಕೋರಾ ಹೋಬಳಿಯ ಕರೀಕೆರೆ ಗ್ರಾಮದಲ್ಲಿ ನಡೆದಿದೆ.
ಶಶಾಂಕ್ ( 16), ಪವನ್ (22), ಚಂದನ್ (16) ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಗಾಯಗೊಂಡಿದ್ದು, ಚಂದನ್ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಗಾಯಗೊಂಡ ಇಬ್ಬರು ಬಾಲಕರನ್ನು ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.
ಸರ್ಕಾರಿ ಶಾಲೆಯಲ್ಲಿ ಧ್ವಜಸ್ತಂಭ ನಿಲ್ಲಿಸುತ್ತಿದ್ದ ವೇಳೆ ವಿದ್ಯುತ್ ತಂತಿಗೆ ತಗುಲಿ ಮೂವರಿಗೆ ಶಾರ್ಟ್ ಸರ್ಕ್ಯೂಟ್ ಆಗಿದೆ ಎನ್ನಲಾಗಿದೆ. ಇನ್ನು ಬಾಲಕರು ಆ ಶಾಲೆಯ ವಿದ್ಯಾರ್ಥಿಗಳಲ್ಲ ಎಂದು ತಿಳಿದುಬಂದಿದೆ.
ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
