Home » Cricket: ಇಂಡಿಯಾ-ಇಂಗ್ಲೆಂಡ್ ಟೆಸ್ಟ್‌ ಕ್ರಿಕೆಟ್‌ – ಇತಿಹಾಸದಲ್ಲಿ ಅತಿ ಕಡಿಮೆ ಅಂತರದ ಗೆಲುವು ದಾಖಲೆ : ಸರಣಿಯನ್ನು 2-2 ಅಂತರದಿಂದ ಸಮಬಲಗೊಳಿಸಿದ ಭಾರತ

Cricket: ಇಂಡಿಯಾ-ಇಂಗ್ಲೆಂಡ್ ಟೆಸ್ಟ್‌ ಕ್ರಿಕೆಟ್‌ – ಇತಿಹಾಸದಲ್ಲಿ ಅತಿ ಕಡಿಮೆ ಅಂತರದ ಗೆಲುವು ದಾಖಲೆ : ಸರಣಿಯನ್ನು 2-2 ಅಂತರದಿಂದ ಸಮಬಲಗೊಳಿಸಿದ ಭಾರತ

0 comments

Cricket: ಸೋಮವಾರ ದಿ ಓವಲ್‌ನಲ್ಲಿ ನಡೆದ ಐದನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ತಂಡವನ್ನು ಆರು ರನ್‌ಗಳಿಂದ ಸೋಲಿಸಿ ಐದು ಪಂದ್ಯಗಳ ಸರಣಿಯನ್ನು 2-2 ಅಂತರದಲ್ಲಿ ಸಮಬಲಗೊಳಿಸಿತು. ಒಂದು ಪಂದ್ಯ ಡ್ರಾ ನಲ್ಲಿ ಅಂತ್ಯವಾಗಿದೆ. ಆಂಗ್ಲರ ವಿರುದ್ಧ ಭಾರತ ಭರ್ಜರಿ ಗೆಲುವು ಸಾಧಿಸಿದೆ. ಓವನ್ ಮೈದಾನದಲ್ಲಿ ನಡೆದ 5ನೇ ಟೆಸ್ಟ್ ಪಂದ್ಯದಲ್ಲಿ ಭಾರತ 6 ರನ್ ಗಳ ಅಮೋಘ ಗೆಲುವು ಸಾಧಿಸಿದೆ.

ಇದು ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಭಾರತದ ಅತ್ಯಂತ ಕಡಿಮೆ ಅಂತರದ ಗೆಲುವು (ರನ್‌ಗಳ ಅಂತರದಲ್ಲಿ), 2004 ರಲ್ಲಿ ಮುಂಬೈನಲ್ಲಿ ಆಸ್ಟ್ರೇಲಿಯಾ ವಿರುದ್ಧ 13 ರನ್‌ಗಳಿಂದ ಗೆದ್ದಿದ್ದಾಗ ಅವರ ಹಿಂದಿನ ಅತ್ಯಂತ ಕಡಿಮೆ ಅಂತರದ ಟೆಸ್ಟ್ ಗೆಲುವು (ರನ್‌ಗಳ ಅಂತರದಲ್ಲಿ) ಆಗಿತ್ತು.

ಕೆನ್ನಿಂಗ್ಟನ್‌ ಓವಲ್ ಗೌಂಡ್ಸ್ ನಲ್ಲಿ ನಡೆದ 5ನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಹೀಗಾಗಿ ಮೊದಲ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಿದ್ದ ಭಾರತ ಆರಂಭಿಕ ಆಘಾತ ಎದುರಿಸಿತ್ತು. ಭಾರತ ತಂಡದ ಆರಂಭಿಕ ಆಟಗಾರರಾದ ಜೈಸ್ವಾಲ್ 2 ರನ್‌ಗೆ ಮತ್ತು ರಾಹುಲ ಕೇವಲ 14 ರನ್‌ಗಳಿಗೆ ಔಟ್ ಆಗಿದ್ದರು.ಹೀಗಾಗಿ ಆರಂಭದಲ್ಲಿ ಭಾರತ ಭರವಸೆ ಕಳೆದುಕೊಂಡಿತ್ತು. ಅಂತಿಮವಾಗಿ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 224 ರನ್‌ಗೆ ಆಲೌಟ್ ಆಗಿತ್ತು.

ಈ ಸಾಮಾನ್ಯ ಮೊತ್ತವನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡದ ಆಟಗಾರರು ಮೊದಲ ಇನ್ನಿಂಗ್ಸ್‌ನಲ್ಲಿ ಆರಂಭದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಮಾಡಿದ್ದರು. ಆದ್ರೆ ಅಂತಿಮವಾಗಿ ಆಂಗ್ಲರ ಪಡೆಯನ್ನು 247 ರನ್‌ಗೆ ಆಲೌಟ್ ಮಾಡುವಲ್ಲಿ ಭಾರತ ಯಶಸ್ವಿಯಾಗಿತ್ತು.ಆ ಮೂಲಕ ಎರಡನೇ ಇನ್ನಿಂಗ್ಸ್ ಗೆ ಇಂಗ್ಲೆಂಡ್ ತಂಡ ಕೇವಲ 23 ರನ್‌ಗಳ ಮುನ್ನಡೆ ಕಾಯ್ದುಕೊಂಡಿದ್ದರು.

ಇದನ್ನೂ ಓದಿ: Subhudendra Shri: ಧರ್ಮಸ್ಥಳ ಪ್ರಕರಣ – ಮಂತ್ರಾಲಯದ ಶ್ರೀಗಳು ಹೇಳಿದ್ದೇನು?

You may also like