6
India: Pakistan: ಆಪರೇಷನ್ ಸಿಂಧೂರ ಕಾರ್ಯಾಚರಣೆ ಬಳಿಕ ಭಾರತ – ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ರಾಜ್ಯದ ಎಲ್ಲಾ ಜಲಾಶಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅದೇ ರೀತಿ ಕುಶಾಲನಗರ ತಾಲೂಕಿನಲ್ಲಿರುವ ಹಾರಂಗಿ ಜಲಾಶಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ನೀರಾವರಿ ಇಲಾಖೆ ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ಆದೇಶ ಹೊರಡಿಸಿದೆ ಅಲ್ಲದೇ ಹೆಚ್ಚಿನ ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.
