Islamabad: ಪಾಕಿಸ್ತಾನ ಸರ್ಕಾರವು ಇಸ್ಲಾಮಾಬಾದ್‌ನ ಭಾರತದ ಹೈಕಮಿಷನ್‌ನ ಸಿಬ್ಬಂದಿಯನ್ನು ಅವರ ವಿಶೇಷ ಸ್ಥಾನಮಾನಕ್ಕೆ ವಿರುದ್ಧವಾದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಉಚ್ಛಾಟನೆ ಮಾಡಿದ್ದು, ಸಂಬಂಧಪಟ್ಟ ಅಧಿಕಾರಿಯನ್ನು 24 ಗಂಟೆಗಳ ಒಳಗೆ ಪಾಕಿಸ್ತಾನ ತೊರೆಯುವಂತೆ ತಿಳಿಸಿದೆ.
ಮೇ 13 ರಂದು, ಬೇಹುಗಾರಿಕೆಯ ಆರೋಪದ ಮೇಲೆ ಭಾರತ ಓರ್ವ ಪಾಕಿಸ್ತಾನಿ ಅಧಿಕಾರಿಯನ್ನು ಉಚ್ಚಾಟಿಸಿತ್ತು, ಭಾರತದ ನಂತರ ಪ್ರತೀಕಾರವೆಂಬಂತೆ ಪಾಕಿಸ್ತಾನವು ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್‌ನಲ್ಲಿ ನಿಯೋಜಿಸಲಾದ ಭಾರತೀಯ ಸಿಬ್ಬಂದಿಯನ್ನು ಸಹ ಉಚ್ಚಾಟಿನೆ ಮಾಡಿತ್ತು.ನಿರ್ಧಾರವನ್ನು ತಿಳಿಸಲು ಭಾರತೀಯ ಚಾರ್ಜ್ ಡಿ’ಅಫೇರ್ಸ್ ಅವರನ್ನು ವಿದೇಶಾಂಗ ಸಚಿವಾಲಯಕ್ಕೆ ಕರೆಯಲಾಗಿತ್ತು.
26 ಜೀವಗಳನ್ನು ಬಲಿ ಪಡೆದ ಪಹಲ್ಗಾಮ್ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಮತ್ತಷ್ಟು ಹದಗೆಟ್ಟಿದ್ದು, ಮುಯ್ಯಿಗೆ ಮುಯ್ಯಿ ಎಂಬಂತೆ ದಾಳಿ ಪ್ರತಿದಾಳಿಗಳು ನಡೆದಿವೆ.
ಪಾಕಿಸ್ತಾನದ ಕ್ರಮಗಳಿಗೆ ಭಾರತ ಬಲವಾಗಿ ಪ್ರತಿಕ್ರಿಯಿಸಿತ್ತುಹಾಗೂ ಕೊನೆಯಲ್ಲಿ ಮೇ 10 ರಂದು ಎರಡೂ ಕಡೆಯ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರ ನಡುವಿನ ಮಾತುಕತೆಯ ನಂತರ ಮಿಲಿಟರಿ ಕ್ರಮಗಳನ್ನು ನಿಲ್ಲಿಸುವ ಬಗ್ಗೆ ಒಪ್ಪಂದ ಮಾಡುವ ಮೂಲಕ ಕದನಕ್ಕೆ ವಿರಾಮ ಘೋಷಿಸಲಾಯಿತು.
