Home » Information department: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅರ್ಜಿ ಆಹ್ವಾನ – ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಗೆ ಅವಕಾಶ

Information department: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅರ್ಜಿ ಆಹ್ವಾನ – ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಗೆ ಅವಕಾಶ

by V R
0 comments

Information department: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2025-26ನೇ ಸಾಲಿನಲ್ಲಿ ಸರ್ಕಾರದ ವಿವಿಧ ಯೋಜನೆ ಕಾರ್ಯಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಬೀದಿನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸುವ ಉದ್ದೇಶದಿಂದ ಕಲಾತಂಡಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರತಿ ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾತಂಡಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಪ್ರತಿ ಬೀದಿನಾಟಕ ತಂಡದಲ್ಲಿ 8 ಜನ ಕಲಾವಿದರಿರಬೇಕಾಗಿದ್ದು, ಇವರಲ್ಲಿ ಕಡ್ಡಾಯವಾಗಿ ಇಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಕ್ಕೆ ಸೇರಿದ ತಂಡವಿರಬೇಕು. ಕಲಾವಿದರನ್ನೊಳಗೊಂಡಿರುವ ಪ್ರತಿ ಜಾನಪದ ಸಂಗೀತ ಕಲಾ ತಂಡದಲ್ಲಿ 3 ಜನ ಕಲಾವಿದರಿದ್ದು, ಇವರಲ್ಲಿ ಕಡ್ಡಾಯವಾಗಿ ಒಬ್ಬರು ಮಹಿಳೆಯರು ಹಾಗೂ ಒಬ್ಬರು ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗಕ್ಕೆ ಸೇರಿದ ಕಲಾವಿದರು ಇರಬೇಕು.

ಆಸಕ್ತ ಮತ್ತು ಅರ್ಹ ಕಲಾತಂಡಗಳು ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ, ಜಿಲ್ಲಾ ಆಡಳಿತ ಭವನದ ಆವರಣ, ಬಿ. ರಾಚಯ್ಯ ಜೋಡಿ ರಸ್ತೆ, ಚಾಮರಾಜನಗರ ಇಲ್ಲಿ ನಿಗದಿತ ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಜುಲೈ 25ರೊಳಗೆ ಸಲ್ಲಿಸಬಹುದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: MUDA Case: ‘ಮುಡಾ ಹಗರಣ’ ಪ್ರಕರಣ – ಸಿಎಂ ಸಿದ್ದರಾಮಯ್ಯ ಪತ್ನಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶ!!

You may also like