Home » ಮಲ ಹೊರುವ ಪದ್ದತಿ, ವರದಿಗೆ ಸೂಚನೆ

ಮಲ ಹೊರುವ ಪದ್ದತಿ, ವರದಿಗೆ ಸೂಚನೆ

0 comments

ಬೆಂಗಳೂರು: ರಾಜ್ಯದಲ್ಲಿ ಮಲ ಹೊರುವ ಪದ್ಧತಿ ನಿಷೇಧ ಕಾಯಿದೆ, ಅನುಷ್ಠಾನ ಮತ್ತು ಪುನರ್ವಸತಿ ಕಲ್ಪಿಸಿರುವ ಸಂಬಂಧ ಸರಕಾರ ಕೈಗೊಂಡಿರುವ ಕ್ರಮಗಳ ಕುರಿತ ಪರಿಷ್ಕೃತ ವರದಿ ಸಲ್ಲಿಸಲು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ.

ಮಲ ಹೊರುವ ಪದ್ಧತಿ ನಿಷೇಧವಿದ್ದರೂ ಮನುಷ್ಯರನ್ನು ಮಲ ಗುಂಡಿಗಳ ಸ್ವಚ್ಛತೆಗೆ ಬಳಸುತ್ತಿರುವ ಕ್ರಮ ಪ್ರಶ್ನಿಸಿ ಎಐಸಿಸಿಟಿಯು ಕರ್ನಾಟಕ ಘಟಕ ಹಾಗೂ ಹೈಕೋರ್ಟ್ ಕಾನೂನು ಸೇವಾ ಸಮಿತಿಯು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಸಿಜೆ ವಿಭು ಬು ಮತ್ತು ಮತ್ತು ನ್ಯಾಯಮೂರ್ತಿ ಸಿ.ಎಂ.ಪೂಣಚ್ಚ ಅವರಿದ್ದ ವಿಭಾಗೀಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತು.

ಕೆಲಕಾಲ ವಾದ ಆಲಿಸಿದ ನ್ಯಾಯಪೀಠ, ಮಲ ಹೊರುವ ಪದ್ಧತಿ ನಿಷೇಧಕ್ಕೆ ಸಂಬಂಧ ಸರಕಾರ ಕೈಗೊಂಡಿರುವ ಕ್ರಮಗಳ ಕುರಿತ ವರದಿ ಸಲ್ಲಿಸಲು ಸೂಚನೆ ನೀಡಿ ವಿಚಾರಣೆ ಮುಂದೂಡಿತು.

ಇದಕ್ಕೂ ಮುನ್ನ ಎಐಸಿಸಿಟಿಯು ಕರ್ನಾಟಕ ಘಟಕದ ಪರ ವಕೀಲರು, “ದೇಶದಲ್ಲಿ ಮಲ ಹೊರುವ ಪದ್ಧತಿ ನಿಷೇಧಕ್ಕೆ ಸಂಬಂಧ ಬಲರಾಂಸಿಂಗ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಹಲವು ಮಾರ್ಗಸೂಚಿಗಳನ್ನು ರಚನೆ ಮಾಡಿದೆ. ಪ್ರಮುಖವಾಗಿ ಮಲ ಗುಂಡಿ ಸ್ವಚ್ಛಗೊಳಿಸುವುದಕ್ಕಾಗಿ ಸ್ಥಳೀಯ ಸಂಸ್ಥೆಗಳು ತಂತ್ರಜ್ಞಾನ ಅಳವಡಿಸಿಕೊಂಡು ಯಂತ್ರಗಳ ಬಳಕೆಯನ್ನು ಕಡ್ಡಾಯಗೊಳಿಸಿದೆ. ಆದರೆ, ರಾಜ್ಯದಲ್ಲಿ ಇನ್ನೂ ಸಂಪೂರ್ಣವಾಗಿ ಆ ವ್ಯವಸ್ಥೆ ಜಾರಿ ಮಾಡಿಲ್ಲ,” ಎಂದರು.

You may also like