Home » ಜ.23: ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಸಭಾಭವನ ಉದ್ಘಾಟನೆ ಮತ್ತು ನೂತನ ರಾಜಗೋಪುರ ಶಿಲಾನ್ಯಾಸ

ಜ.23: ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಸಭಾಭವನ ಉದ್ಘಾಟನೆ ಮತ್ತು ನೂತನ ರಾಜಗೋಪುರ ಶಿಲಾನ್ಯಾಸ

0 comments

ನಾರಾವಿ: ಸೂರ್ಯನಾರಾಯಣ ದೇವಸ್ಥಾನದ ಸಭಾಭವನ ಉದ್ಘಾಟನೆ ಮತ್ತು ನೂತನ ರಾಜಗೋಪುರ ಶಿಲಾನ್ಯಾಸ ಕಾರ್ಯಕ್ರಮ ಜ.23ರಂದು ನಡೆಯಲಿದೆ. ಮುಜರಾಯಿ ಇಲಾಖೆ ಸಚಿವ ರಾಮಲಿಂಗ ರೆಡ್ಡಿ ಸಭಾಭವನ ಉದ್ಘಾಟನೆಯನ್ನು ಮಾಡಲಿದ್ದಾರೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್ ರಾಜಗೋಪುರ ಶಿಲಾನ್ಯಾಸ ಮಾಡಲಿದ್ದಾರೆ. ಶಾಸಕ ಹರೀಶ್ ಪೂಂಜ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ರಾಜ್ಯಸಭಾ ಸದಸ್ಯ ಡಾ.ಡಿ. ವೀರೇಂದ್ರ ಹೆಗ್ಗಡೆ, ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಭೋಜೇ ಗೌಡ, ಐವನ್ ಡಿ’ಸೋಜಾ, ಪ್ರತಾಪ್ ಸಿಂಹ ನಾಯಕ್, ಮಂಜುನಾಥ ಭಂಡಾರಿ, ಧನಂಜಯ ಸರ್ಜಿ, ಕಿಶೋರ್ ಬಿ. ಆರ್. ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಧ್ಯಕ್ಷ ರಕ್ಷಿತ್ ಶಿವರಾಂ,ಧಾರ್ಮಿಕ ಪರಿಷತ್ ಸದಸ್ಯ ಯೋಗೀಶ್ ಕುಮಾರ್ ನಡಕ್ಕರ, ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ.ಕೃಷ್ಣತಂತ್ರಿ, ನಾರಾವಿ ಸೂರ್ಯನಾರಾಯಣ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರಾದ ಎನ್ ಶ್ರೀನಿವಾಸ ವಾಸುದೇವ, ಜಗದೀಶ್ ಹೆಗ್ಡೆ, ಎನ್ ದಿವಾಕರ ಭಂಡಾರಿ, ಲಕ್ಷ್ಮಣ ಬಂಗೇರ, ಶಂಕ‌ರ್ ತುಂಬೆಗುಡ್ಡೆ, ಯಶೋಧ, ರಶ್ಮಿ ಉಪಸ್ಥಿತಿ ಇರಲಿದ್ದಾರೆ ಎಂದು ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಆಡಳಿತ ಮೊಕ್ತಸರ ರವೀಂದ್ರ ಪೂಜಾರಿ ತಿಳಿಸಿದ್ದಾರೆ.

You may also like