4
Mangaluru: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕೇರಳ ಗಡಿನಾಡ ಶಾಖೆಯ ಅಧ್ಯಕ್ಷರೂ, ಹಿರಿಯ ಸಾಹಿತಿ, ಯಕ್ಷಗಾನ ವಿದ್ವಾಂಸರು, ತಾಳಮದ್ದಳೆಯ ಅರ್ಥಧಾರಿಗಳಾದ ಶ್ರೀಮತಿ ಜಯಲಕ್ಷ್ಮಿ ಕಾರಂತ್‌ರವರಿಗೆ ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನ ಭಂಟರ ಭವನದಲ್ಲಿ ಮಂಗಳೂರಿನ (Mangaluru) ಯಕ್ಷ ಧ್ರುವ ಪಟ್ಲ ಪೌಂಡೇಷನ್ ಟ್ರಸ್ಟ್ ಹಮ್ಮಿಕೊಳ್ಳಲಾದ ಮಹಿಳಾ ಘಟಕದ ೮ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ “ಯಕ್ಷ ಧ್ರುವ” ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು ಎಂದು ಕಲಾಕುಂಚ ಯಕ್ಷರಂಗದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
