Home » ಸರ್ಕಾರಿ ಕಚೇರಿ, ಶಾಲೆಗಳಲ್ಲಿ ಜೀನ್ಸ್, ಟೀ ಶರ್ಟ್ ಇನ್ನು ಮುಂದೆ ನಿಷೇಧ!!!

ಸರ್ಕಾರಿ ಕಚೇರಿ, ಶಾಲೆಗಳಲ್ಲಿ ಜೀನ್ಸ್, ಟೀ ಶರ್ಟ್ ಇನ್ನು ಮುಂದೆ ನಿಷೇಧ!!!

0 comments

ಸರ್ಕಾರಿ ನೌಕರರು ತಮ್ಮ ಕೆಲಸದ ಸ್ಥಳಗಳಲ್ಲಿ ಜೀನ್ಸ್ ಮತ್ತು ಟಿ-ಶರ್ಟ್ ಧರಿಸಬಾರದು, ಧರಿಸಿದರೆ ಅವರ ವಿರುದ್ಧ ಆಡಳಿತಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೊರಡಿಸಿದ ಹೊಸ ನಿರ್ದೇಶನದಲ್ಲಿ ತಿಳಿಸಿದ್ದಾರೆ. ಇದು ಉತ್ತರ ಪ್ರದೇಶದ ಭದೋಹಿ ಜಿಲ್ಲೆಯಲ್ಲಿ ಜಾರಿಗೆ ಬರಲಿದೆ.

ಭದೋಹಿಯ ಜಿಲ್ಲಾ ಮ್ಯಾಜಿಸ್ಟ್ರೇಟ್ ಆರ್ಯಕ ಅಗೌರಿ ಹೊರಡಿಸಿದ ಜೀನ್ಸ್ ಮತ್ತು ಟಿ-ಶರ್ಟ್‌ಗಳ ಮೇಲಿನ ನಿಷೇಧವು ಜಿಲ್ಲೆಯ ಸರ್ಕಾರಿ ಶಾಲೆಗಳ ಶಿಕ್ಷಕರಿಗೂ ಅನ್ವಯಿಸುತ್ತದೆ ಎಂದಿದ್ದಾರೆ.

ಸರ್ಕಾರಿ ನೌಕರರು ತಮ್ಮ ಕಚೇರಿಗಳಿಗೆ ಜೀನ್ಸ್ ಮತ್ತು ಟೀ ಶರ್ಟ್‌ಗಳಲ್ಲಿ ಬರುತ್ತಿರುವುದು. ಇದನ್ನು ಗಮನಿಸಲಾಗಿದೆ. ಇದು ಸ್ವೀಕಾರಾರ್ಹವಲ್ಲ ಎಂದು ಡಿಎಂ ಹೊರಡಿಸಿದ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಈ ನಿರ್ದೇಶನದ ಉಲ್ಲಂಘನೆಯನ್ನು ಗಂಭೀರವಾಗಿ ತೆಗೆದುಕೊಳ್ಳಲಾಗುವುದು ಎಂದು ಅಖ್‌ರಿ ಎಚ್ಚರಿಕೆ ನೀಡಿದ್ದಾರೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಅನುಸರಿಸಲಾಗುತ್ತಿದೆಯೇ ಎಂದು ಪರಿಶೀಲಿಸಲು ಹಿರಿಯ ಅಧಿಕಾರಿಗಳ ತಂಡಗಳು ಗುರುವಾರದಿಂದ ಶಾಲೆಗಳು ಮತ್ತು ಇತರ ಕಚೇರಿಗಳಿಗೆ ಭೇಟಿ ನೀಡಲಿವೆ ಎಂದು ಡ್ರೆಸ್ ಕೋಡ್ ಸೂಚನೆಯಲ್ಲಿ ತಿಳಿಸಲಾಗಿದೆ. ನಿರ್ದೇಶನವನ್ನು ಉಲ್ಲಂಘಿಸುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಹಿರಿಯ ಜಿಲ್ಲಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆದರೆ ಈ ನಿಮಯಮಕ್ಕೆ ಪರ ವಿರೋಧಗಳು ವ್ಯಕ್ತವಾಗಿವೆ. ಉದ್ಯೋಗಿಗಳ ಒಂದು ವಿಭಾಗ ಕೆಲಸದ ಸ್ಥಳದಲ್ಲಿ ಜೀನ್ಸ್ ಧರಿಸುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹೇಳಿದೆ. “ಶಿಸ್ತಿನಿಂದ ಡ್ರೆಸ್ ಮಾಡಿಕೊಳ್ಳಬೇಕು… ಹೇಗೆ ಬಟ್ಟೆ ಧರಿಸಬೇಕು ಎಂಬುದರ ಮೇಲೆ ಯಾವುದೇ ನಿರ್ಬಂಧಗಳನ್ನು ಹೇರಬಾರದು” ಎಂದು ಇಲ್ಲಿನ ಸರ್ಕಾರಿ ಉದ್ಯೋಗಿಗಳು ಹೇಳುತ್ತಿದ್ದಾರೆ.

You may also like

Leave a Comment