10
Vijayalakshmi Shibaroor: ಕರ್ನಾಟಕ ಸರಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸೆ.19ರಂದು ಬೆಂಗಳೂರು ವಾರ್ತಾ ಸೌಧದ ಸಮಾಲೋಚನಾ ಸಭಾಂಗಣದಲ್ಲಿ ನಡೆದ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು (Vijayalakshmi Shibaroor) ಅವರಿಗೆ 2017ನೇ ಸಾಲಿನ ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.
2024ನೇ ಕ್ಯಾಲೆಂಡರ್ ವರ್ಷದ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಹಾಗೂ 2017ರಿಂದ 2023ನೇ ಕ್ಯಾಲೆಂಡರ್ ವರ್ಷದ ಪರಿಸರ ಮತ್ತು ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವು ಸಾಧಕ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
