4
Death: ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಶೂಟಿಂಗ್ ವೇಳೆ ಅವಘಡ ಸಂಭವಿಸಿದ್ದು. ಈ ಸಿನಿಮಾ ಸೆಟ್ನಲ್ಲಿ ಕೆಲಸ ಮಾಡುತ್ತಿದ್ದ ಜೂನಿಯರ್ ಆರ್ಟಿಸ್ಟ್ ಕೇರಳ ಮೂಲದ ಕಪಿಲ್ ಅವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಬೈಂದೂರಿನ ತಾಲೂಕಿನ ಕೊಲ್ಲೂರಿನಲ್ಲಿ ನಡೆದಿದೆ.
ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಇದರಿಂದ ಸಿನಿಮಾ ತಂಡಕ್ಕೆ ಮತ್ತೆ ವಿಘ್ನ ಎದುರಾದಂತೆ ಆಗಿದೆ.
ಶೂಟಿಂಗ್ ಮುಗಿಸಿದ ಬಳಿಕ ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ಕಪಿಲ್ ಅವರು ತಮ್ಮ ತಂಡದವರ ಜೊತೆ ಈಜಲು ತೆರಳಿದ್ದರು. ನೀರಿನ ಆಳ ತಿಳಿಯದೇ ಅವರು ನದಿಗೆ ಇಳಿದ ವೇಳೆ ಅವರು ಮುಳುಗಿ ಸಾವಿಗೀಡಾಗಿದ್ದಾರೆ.
