Home » Karnataka: ‘ಜಮೀನಿನ ಪೋಡಿ ನಕ್ಷೆ’ ಮೊಬೈಲ್ ನಲ್ಲಿ ಪಡೆಯಲು ಜಸ್ಟ್ ಹೀಗೆ ಮಾಡಿ

Karnataka: ‘ಜಮೀನಿನ ಪೋಡಿ ನಕ್ಷೆ’ ಮೊಬೈಲ್ ನಲ್ಲಿ ಪಡೆಯಲು ಜಸ್ಟ್ ಹೀಗೆ ಮಾಡಿ

0 comments

Karnataka: ಪೋಡಿ ನಕ್ಷೆ ಮಾಡಿಸುವುದಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವುದಕ್ಕಾಗಿ ಸರ್ಕಾರವು ಈಗ ಆನ್ಲೈನ್ ವ್ಯವಸ್ಥೆಯನ್ನು ಮಾಡಿದೆ. ರೈತರು ಸ್ವತಃ ಅವರೆ ಮೊಬೈಲ್ ನಲ್ಲಿ ಜಮೀನಿನ ಪೋಡಿ ನಕ್ಷೆ ತಯಾರಿಸಿಕೊಳ್ಳಬಹುದು. ಇನ್ಮುಂದೆ ಮನೆಯಲ್ಲಿಯೇ ಕುಳಿತು ತಮ್ಮ ಜಮೀನಿನ ಭಾಗ ಮಾಡಿಕೊಳ್ಳಲು ಇದು ಅವಕಾಶ ಕಲ್ಪಿಸಿದೆ.

ಮೊಬೈಲ್ ನಲ್ಲಿ ಪೋಡಿ ನಕ್ಷೆ ಪಡೆಯುವುದು ಹೇಗೆ?

ಮೊದಲು ಅಧಿಕೃತ ವೆಬ್ ಸೈಟ್ https://bhoomojini.karnataka.gov.in/Service27 ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಭೂ ಕಂದಾಯ ಇಲಾಖೆಯ ಸ್ವಾವಲಂಬಿ ಆಯಪ್ ಪೇಜ್ ಓಪನ್ ಆಗುತ್ತದೆ. ರೈತರು ಮೊಬೈಲ್ ನಂಬರ್ ಹಾಕಿ ಕ್ಯಾಪ್ಚ್ಯಾ ಕೋಡ್ ನಮೂದಿಸಬೇಕು.

ನಂತರ ಇನ್ನೊಂದು ಪೇಜ್ ತೆರೆದುಕೊಳ್ಳುತ್ತದೆ. ಅಲ್ಲಿ ಹೊಸ ಅರ್ಜಿ ಮೇಲೆ ಕ್ಲಿಕ್ ಮಾಡಿ ವೈಯಕ್ತಿಕ ವಿವರಗಳನ್ನು ಭರ್ತಿ ಮಾಡಬೇಕು. ಆಧಾರ್ ಕಾರ್ಡ್ ನಲ್ಲಿರುವ ಹೆಸರನ್ನು ನಮೂದಿಸಿ ಮುಂದಿನ ಪ್ರಕ್ರಿಯೆ ಪೂರ್ಣಗೊಳಿಸಿದರೆ ಪೋಡಿ ನಕ್ಷೆ ಸಿಗುತ್ತದೆ.

You may also like