Home » ಜು.26 : ಬಿಜೆಪಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಣಿ ಸಭೆ

ಜು.26 : ಬಿಜೆಪಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಣಿ ಸಭೆ

by Praveen Chennavara
0 comments

ಸುಳ್ಯ : ಬಿಜೆಪಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಣಿ ಸಭೆಯು ಜುಲೈ 26 ರಂದು ಸುಳ್ಯದ ಕೊಡಿಯಾಲಬೈಲು ಗೌಡ ಸಮುದಾಯ ಭವನ ದಲ್ಲಿ ಜರುಗಲಿದೆ.

ಈ ಸಭೆಗೆ ಮಂಡಲದ ಪದಾಧಿಕಾರಿಗಳು, ಸದಸ್ಯರು, ವಿಶೇಷ ಆಹ್ವಾನಿತರು, ಮಂಡಲದ ಮೋರ್ಚಾಗಳ ಅಧ್ಯಕ್ಷ ಪ್ರಧಾನ
ಕಾರ್ಯದರ್ಶಿಗಳು, ಮಂಡಲದ ಪ್ರಕೋಷ್ಠಗಳ ಸಂಚಾಲಕ ಸಹ
ಸಂಚಾಲಕರು, ರಾಜ್ಯದ ಪದಾಧಿಕಾರಿಗಳು, ರಾಜ್ಯ ಕಾರ್ಯಕಾರಿಣಿ ಸದಸ್ಯರು,ರಾಜ್ಯದ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ವಿವಿಧ ಪ್ರಕೋಷ್ಠಗಳ ಸಂಚಾಲಕರು ಸಹ ಸಂಚಾಲಕರು, ಮಂಡಲದಲ್ಲಿರುವ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಸಮಿತಿ ಸದಸ್ಯರು, ಜಿಲ್ಲೆಯ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಸದಸ್ಯರು, ಪಟ್ಟಣ ಪಂಚಾಯತ್ ಸದಸ್ಯರು, ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ನ ನಿಕಟಪೂರ್ವ ಸದಸ್ಯರು,ಗ್ರಾಮ ಪಂಚಾಯತ್ ಅಧ್ಯಕ್ಷರುಗಳು,ಪ್ರಾ.ಕೃ.ಪತ್ತಿನ ಸಹಕಾರಿ ಸಂಘಗಳ ಅಧ್ಯಕ್ಷರು, ಮಹಾಶಕ್ತಿಕೇಂದ್ರಗಳ ಅಧ್ಯಕ್ಷ ಕಾರ್ಯದರ್ಶಿಗಳು, ಶಕ್ತಿಕೇಂದ್ರ ಪ್ರಮುಖರು ಮಂಡಲದ ಸಾಮಾಜಿಕ ಜಾಲತಾಣದ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಸುಳ್ಯ ಮಂಡಲ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

You may also like

Leave a Comment