Home » ಕಾರ್ಕಳ | ಉಪನ್ಯಾಸಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಕಾರ್ಕಳ | ಉಪನ್ಯಾಸಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

0 comments

ಉಪನ್ಯಾಸಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.

ರವಳನಾಥ ಶರ್ಮಾ (32) ಆತ್ಮಹತ್ಯೆ ಮಾಡಿಕೊಂಡ ಉಪನ್ಯಾಸಕ ಎಂದು ತಿಳಿದುಬಂದಿದೆ.

ಇವರು, ಎಂಬಿಎ ಪದವೀಧರರಾಗಿದ್ದು, 4 ವರ್ಷಗಳ ಹಿಂದೆ ಕಾರ್ಕಳದ ಎಂಪಿಎಂ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿದ್ದರು. ಜೊತೆಗೆ ಇವರು ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಆರ್ಚಕರಾಗಿದ್ದರು. ನಿನ್ನೆ ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನೆಂದು ಈವರೆಗೆ ತಿಳಿದು ಬಂದಿಲ್ಲ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

You may also like

Leave a Comment