Home » Karkala: ಮೀನು ಹಿಡಿಯಲು ಹೋಗಿದ್ದ ಕಾಲೇಜು ವಿದ್ಯಾರ್ಥಿ ಸಹಿತ ಇಬ್ಬರು ನೀರಿನಲ್ಲಿ ಮುಳುಗಿ ಸಾವು

Karkala: ಮೀನು ಹಿಡಿಯಲು ಹೋಗಿದ್ದ ಕಾಲೇಜು ವಿದ್ಯಾರ್ಥಿ ಸಹಿತ ಇಬ್ಬರು ನೀರಿನಲ್ಲಿ ಮುಳುಗಿ ಸಾವು

by Praveen Chennavara
0 comments
Karkala

Karkala: ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಮುಗೆರ್ಕಳ ಸಮೀಪದ ಉಬ್ಬರಬೈಲು ಎಂಬಲ್ಲಿ ಆದಿತ್ಯವಾರ ನಡೆದಿದೆ.

ಮೃತಪಟ್ಟವರನ್ನು ಮುಡ್ಡಾಯಿಗುಡ್ಡೆ ನಿವಾಸಿ ಹರೀಶ್ ಪೂಜಾರಿ (48) ಮತ್ತು ಅವರ ಅಕ್ಕನ ಮಗ ಕಾರ್ಕಳ ಕ್ರೈಸ್ಟ್ ಕಿಂಗ್ ಕಾಲೇಜು ವಿದ್ಯಾರ್ಥಿ ಹೃತೇಶ್ ಪೂಜಾರಿ (18) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: Harish Poonja: ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣ – ಪೊಲೀಸರ ಕರ್ತವ್ಯಕ್ಕೆ ಅಡ್ಡಿ ,ದುರ್ವರ್ತನೆ ಶಾಸಕ ಹರೀಶ್ ಪೂಂಜ ವಿರುದ್ಧ ಪ್ರಕರಣ ದಾಖಲು

ಇವರಿಬ್ಬರೂ ಉಬ್ಬರಬೈಲು ಗುಂಡಿಯಲ್ಲಿ ಮೀನು ಹಿಡಿಯಲು ಹೋಗಿದ್ದ ಸಂದರ್ಭ ನೀರಿನ ಸುಳಿಗೆ ಸಿಕ್ಕಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಅಜೆಕಾರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Rain Alert: ಕರಾವಳಿಯಲ್ಲಿ ಪೂರ್ವ ಮುಂಗಾರು ಮಳೆ ಬಿರುಸು : ಮೇ.22ರವರೆಗೆ ಯೆಲ್ಲೋ ಅಲರ್ಟ್

You may also like

Leave a Comment