8
Mangaluru; ಬೆಳಗಾವಿಯಲ್ಲಿ ಮರಾಠಿಗರ ಪುಂಡಾಡಿಕೆ ಖಂಡನೆ ಮಾಡಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಲವು ಕನ್ನಡ ಪರ ಸಂಘಟನೆಗಳು ಶನಿವಾರ (ಮಾ.22) ರಂದು ರಾಜ್ಯ ಬಂದ್‌ಗೆ ಕರೆ ನೀಡಿದೆ. ಈ ಕುರಿತು ಇದೀಗ ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ ಹಾಗೂ ಕೆನರಾ ಬಸ್ ಮಾಲಕರ ಸಂಘ ಈ ಬಂದ್‌ಗೆ ಸಹಕಾರ ನೀಡುವುದಿಲ್ಲ ಎಂದು ತಿಳಿಸಿದೆ.
ಬಸ್ ಬಂದ್ ಮಾಡುವ ಕುರಿತು ಯಾವುದೇ ಸಂಘಟನೆಗಳು ನಮ್ಮನ್ನು ಕೇಳಿಕೊಂಡಿಲ್ಲ. ಸಾರ್ವಜನಿಕರಿಗೆ ತೊಂದರೆಯಾಗುವ ಕಾರಣ ಬಂದ್ ಮಾಡುವುದು ಇಲ್ಲ ಎಂದು ಕೆನರಾ ಬಸ್ ಮಾಲಕರ ಸಂಘದ ಅಧ್ಯಕ್ಷ ರಾಜವರ್ಮ ಬಳ್ಳಾಲ್ ಅವರು ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.
