Karnataka By Election: ರಾಜ್ಯದ ಪಕ್ಷಗಳು ಭಕ ಪಕ್ಷಿಯಂತೆ ಕಾಯುತ್ತಿದ್ದ ದಿನ ಎದರಾಗಿದೆ. ಹೌದು, ಚನ್ನಪಟ್ಟಣ(Channapattana), ಶಿಗ್ಗಾವಿ(Shiggavi), ಸಂಡೂರು(Sanduru) 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಈ ಬೆನ್ನಲ್ಲೇ ಎಲ್ಲಾ ಪಕ್ಷಗಳಲ್ಲೂ ಚುನಾವಣಾ ಚಟುವಟಿಕೆಗಳು ಗರಿಗೆದರಿದ್ದು, ಎಲ್ಲಾ ಪಾರ್ಟಿಗಳ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ.
ಚನ್ನಪಟ್ಟಣ: ಚನ್ನಪಟ್ಟಣ ಕ್ಷೇತ್ರದಿಂದ ಡಿಸಿಎಂ ಡಿ.ಕೆ. ಶಿವಕುಮಾರ್(D K Shivkumar) ಕಾಂಗ್ರೆಸ್ ಅಭ್ಯರ್ಥಿಯಾಗಿ ನಾನೇ ಸ್ಪರ್ಧಿಸುವುದಾಗಿ ಹೇಳಿದ್ದರೂ ಡಿ.ಕೆ. ಸುರೇಶ್ ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ಅಲ್ಲದೆ ರಘುನಂದನ್ ರಾಮಣ್ಣ ಅವರ ಹೆಸರೂ ಮುಂಚೂಣಿಯಲ್ಲಿದೆ. ಜೆಡಿಎಸ್ ನಿಂದ ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಜಯಮತ್ತು ಸೇರಿ ಹಲವರ ಹೆಸರು ಪರಿಗಣನೆಯಲ್ಲಿದೆ ಎನ್ನಲಾಗಿದೆ. ಬಿಜೆಪಿಯಿಂದ ಸಿ.ಪಿ. ಯೋಗೇಶ್ವರ್ ಸ್ಪರ್ಧೆಗೆ ಸಿದ್ಧತೆ ನಡೆಸಿ, ಎನ್.ಡಿ.ಎ. ಅಭ್ಯರ್ಥಿಯಾಗಲು ಪ್ರಯತ್ನಿಸಿದ್ದಾರೆ.
ಶಿಗ್ಗಾವಿ : ಇಲ್ಲಿ ಕಾಂಗ್ರೆಸ್ ನಿಂದ ಯಾಸಿರ್ ಅಹಮದ್ ಖಾನ್, ಸೈಯದ್ ಅಜ್ಜಂಪೀರ್ ಖಾದ್ರಿ, ಸಂಜೀವ ನೀರಲಗಿ, ಬಿಜೆಪಿಯಿಂದ ಶಶಿಧರ ಎಲಿಗಾರ, ಶ್ರೀಕಾಂತ ದುಂಡಿಗೌಡರ, ಭರತ್ ಬೊಮ್ಮಾಯಿ ಇಲ್ಲವೇ ನಿರಾಣಿ ಅಭ್ಯರ್ಥಿಯಾಗಬಹುದೆಂದು ಹೇಳಲಾಗಿದೆ.
ಸಂಡೂರು : ಈ ಕ್ಷೇತ್ರದಿಂದ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅನ್ನಪೂರ್ಣ, ಸೌಪರ್ಣಿಕಾ, ಬಿಜೆಪಿಯಿಂದ ದೇವೇಂದ್ರಪ್ಪ, ಬಂಗಾರು ಹನುಮಂತು, ಬಿ. ಶ್ರೀರಾಮುಲು ಸೇರಿ ಹಲವರ ಹೆಸರುಗಳು ಪರಿಶೀಲನೆಯಲ್ಲಿದೆ ಎಂದು ಹೇಳಲಾಗಿದೆ.
ಯಾವಾಗ ಚುನಾವಣೆ, ಮತ ಎಣಿಕೆ?
ನವೆಂಬರ್ 13ರಂದು ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಇನ್ನು ನವೆಂಬರ್ 23ರಂದು ಈ ಮೂರು ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ
ಅಂದಹಾಗೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಹಾಗೂ ಇ.ತುಕಾರಾಂ ಅವರುಗಳ ರಾಜೀನಾಮೆಯಿಂದ ಮೂರು ವಿಧಾನಸಭಾ ಕ್ಷೇತ್ರಗಳ ಸ್ಥಾನ ತೆರವಾಗಿದ್ವು. ಮೂವರು ಕೂಡ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸಂಸತ್ ಪ್ರವೇಶಿಸಿದ್ದಾರೆ. ಇವರ ರಾಜೀನಾಮೆಯಿಂದ ತೆರವಾದ ಕ್ಷೇತ್ರಕ್ಕೆ ಇದೀಗ ಉಪ ಚುನಾವಣೆ ನಡೆಯಲಿದೆ.
