Home » Karnataka Gvt: 12, 000 ಪೌರಕಾರ್ಮಿಕರಿಗೆ ಖಾಯಂ ನೇಮಕಾತಿ ಪತ್ರ ವಿತರಿಸಿದ ಕರ್ನಾಟಕ ಸರ್ಕಾರ!!

Karnataka Gvt: 12, 000 ಪೌರಕಾರ್ಮಿಕರಿಗೆ ಖಾಯಂ ನೇಮಕಾತಿ ಪತ್ರ ವಿತರಿಸಿದ ಕರ್ನಾಟಕ ಸರ್ಕಾರ!!

0 comments

Karnataka Gvt: ಕಾರ್ಮಿಕರ ದಿನಾಚರಣೆಯ ಅಂಗವಾಗಿ ರಾಜ್ಯ ಸರ್ಕಾರವು ಸುಮಾರು 12 ಸಾವಿರ ಪೌರಕಾರ್ಮಿಕರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಹೌದು, ಕರ್ನಾಟಕ 12,692 ಪೌರಕಾರ್ಮಿಕರಿಗೆ ಖಾಯಂ ಮಾಡಿ ನೇಮಕಾತಿ ಪತ್ರ ವಿತರಿಸಿದೆ.

ಪೌರಕಾರ್ಮಿಕರ ದಿನ ನಿಮಿತ್ತ ಬಿಬಿಎಂಪಿ ಅರಮನೆ ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ ‘ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಣೆ’ ಕಾರ್ಯಕ್ರಮದಲ್ಲಿ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP)ಯ ನೇರ ವೇತನದಡಿಯಲ್ಲಿ ಕೆಲಸ ಮಾಡುತ್ತಿರುವ 12,692 ಪೌರಕಾರ್ಮಿಕರನ್ನು ಕಾಯಂಗೊಳಿಸಿ, ನೇಮಕ ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ನೀಡಿದರು.

ಅಲ್ಲದೆ ಮುಂದಿನ ದಿನಗಳಲ್ಲಿ ಅಂದಾಜು 9 ಸಾವಿರ ವಾಹನ ಚಾಲಕರು, ಸಹಾಯಕರು ಹಾಗೂ ಆಪರೇರ್ಟಸ್​ಗಳನ್ನೂ ಖಾಯಂ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅಲ್ಲದೆ ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

You may also like