Home » Karnataka Gvt : ರೈತರಿಗೆ ಗುಡ್ ನ್ಯೂಸ್- 2400 ರೂ. ದರದಲ್ಲಿ 50 ಕ್ವಿಂಟಲ್ ಮೆಕ್ಕೆಜೋಳ ಖರೀದಿಗೆ ಸರ್ಕಾರ ಗ್ರೀನ್ ಸಿಗ್ನಲ್

Karnataka Gvt : ರೈತರಿಗೆ ಗುಡ್ ನ್ಯೂಸ್- 2400 ರೂ. ದರದಲ್ಲಿ 50 ಕ್ವಿಂಟಲ್ ಮೆಕ್ಕೆಜೋಳ ಖರೀದಿಗೆ ಸರ್ಕಾರ ಗ್ರೀನ್ ಸಿಗ್ನಲ್

0 comments

Karnataka Gvt : ಬೆಳಗಾವಿ ಅಧಿವೇಶನಕ್ಕೆ ಮುನ್ನ ರೈತರಿಗೆ ಸಿಹಿ ಸುದ್ದಿ ಸಿಕ್ಕಿದ್ದು, 2400 ರೂ. ದರದಲ್ಲಿ 50 ಕ್ವಿಂಟಲ್ ಮೆಕ್ಕೆಜೋಳ ಖರೀದಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.

ಹೌದು, ರೈತರಿಂದ ಮೆಕ್ಕೆಜೋಳ ಖರೀದಿಯ ಗರಿಷ್ಠ ಮಿತಿಯನ್ನು ಸರ್ಕಾರ ಹೆಚ್ಚಳ ಮಾಡಿದೆ. ಇದುವರೆಗೂ 20 ಕ್ವಿಂಟಲ್ ಜೋಳ ಖರೀದಿಗೆ ಮಾತ್ರ ಅನುಮತಿ ಇತ್ತು. ಆದರೆ ಇದೀಗ 20 ಕ್ವಿಂಟಲ್ ನಿಂದ 50 ಕ್ವಿಂಟಲ್ ಗೆ ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ.

FRUITS ತಂತ್ರಾಂಶದಲ್ಲಿ ನೋಂದಾಯಿತ ಜಮೀನು ಆಧಾರದ ಮೇಲೆ ಸಹಕಾರ ಸಂಘಗಳ ಮೂಲಕ ಖರೀದಿಗೆ ಆದ್ಯತೆ ನೀಡಲಾಗುತ್ತಿದೆ. ಪ್ರತಿಯೊಬ್ಬ ರೈತರಿಗೆ 20 ಕ್ವಿಂಟಾಲ್‌ನಿಂದ 50 ಕ್ವಿಂಟಾಲ್‌ಗೆ ಹೆಚ್ಚಿಸಲಾಗಿದೆ. ಪ್ರತಿ ಕ್ವಿಂಟಾಲ್‌ಗೆ 2,400 ರೂ. ಬೆಂಬಲ ಬೆಲೆ ನೀಡಲಾಗುತ್ತದೆ. ಆ ಮೂಲಕ ಸಣ್ಣ ಮತ್ತು ಮಧ್ಯಮ ರೈತರಿಗೆ ದೊಡ್ಡ ಪ್ರಮಾಣದಲ್ಲಿ ಲಾಭ ಉಂಟಾಗಲಿದೆ.

ರೈತರು ಹಾಗೂ ರೈತ ಸಂಘಟನೆಗಳ ಮನವಿ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸಾವಿರಾರು ಮೆಕ್ಕೆಜೋಳ ಬೆಳೆಗಾರ ರೈತರಿಗೆ ನೇರ ಲಾಭವಾಗಲಿದ್ದು, ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡುವ ಸ್ಥಿತಿಯಿಂದ ರಕ್ಷಣೆ ದೊರೆಯಲಿದೆ ಎಂದು ರೈತ ಮುಖಂಡರು ಸಂತಸ ವ್ಯಕ್ತಪಡಿಸಿದ್ದಾರೆ.

You may also like