10
Basavaraj Rayareddy: ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬವರ್ ವನ್ ಆಗಿದೆ ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಶಾಸಕ ಬಸವರಾಜ ರಾಯರೆಡ್ಡಿ ಹೇಳಿಕೆ ನೀಡಿದ್ದು, ವಿಪಕ್ಷಗಳು ಸರಕಾರದ ವಿರುದ್ಧ ಮುಗಿಬೀಳುತ್ತಿವೆ. ಈ ಹೇಳಿಕೆಗೆ ಸ್ಪಷ್ಟನೆ ನೀಡುವ ಭರದಲ್ಲಿ ಶಾಸಕ ಬಸವರಾಜ ರಾಯರೆಡ್ಡಿ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ ಕಳಪೆ ಗುಣಮಟ್ಟದ ಕಾಮಗಾರಿ ಆಗುತ್ತಿದೆ. ಇದು ನಿಲ್ಲಬೇಕು ಎನ್ನುವ ಹೇಳಿಕೆ ನೀಡಿದ್ದಾರೆ. ಕರ್ನಾಟಕದ ದೃಷ್ಟಿಯಿಂದ ಭ್ರಷ್ಟಾಚಾರ ವಿಚಾರವಾಗಿ ನಾನು ಹೇಳಿದ್ದು, ಯಾವ ಪಕ್ಷದ ವಿರುದ್ಧ ಕೂಡಾ ನಾನು ಮಾತಾಡಿಲ್ಲ. ಮುಖ್ಯಮಂತ್ರಿಗಳು ಭ್ರಷ್ಟಾಚಾರ ವ್ಯವಸ್ಥೆ ತಡೆಗಟ್ಟಲು ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಈಗಿನ ಆಡಳಿತ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಇಲ್ಲ ಅಂತ ಹೇಳಲ್ಲ ಎಂದು ಹೇಳಿದ್ದಾರೆ.
