ಸದ್ಯ ಮಳೆಯ ಅಬ್ಬರ ಶುರುವಾಗಿದ್ದು, ಇಂದಿನಿಂದ ಮತ್ತೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು, ರಾಜ್ಯದ ಹಲವೆಡೆ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಕೆಲವು ದಿನಗಳಿಂದ ಶೀತಗಾಳಿಯ ಜೊತೆಗೆ ತುಂತುರು ಮಳೆಯಾಗುತ್ತಿದೆ. ಹಾಗೇ ಈ ಮಳೆ ಇನ್ನೂ 4 ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಜ್ಞ ಎಚ್ಚರಿಕೆ ನೀಡಿದೆ.
ಹಾಗೇ ಇಂದಿನಿಂದ ದಕ್ಷಿಣ ಅಂಡಮಾನ್ ಸಮುದ್ರ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗಲಿದೆ. ಈಗಾಗಲೇ ಅರಬ್ಬಿ ಸಮುದ್ರದಲ್ಲಿ 5.8 ಕಿಲೋ ಮೀಟರ್ ಎತ್ತರದ ಸುಳಿಗಾಳಿ ಉಂಟಾಗಿದ್ದು, ಇದು ಕರ್ನಾಟಕ ಕರಾವಳಿಯ ವಿರುದ್ಧ ದಿಕ್ಕಿನಲ್ಲಿ ಸಾಗಿದ್ದರಿಂದ ಅದರ ಪ್ರಭಾವ ಅಷ್ಟೇನು ಉಂಟಾಗುವುದಿಲ್ಲ.
ಹಾಗಾಗಿ ಗುರುವಾರ ಕರ್ನಾಟಕ ಕರಾವಳಿ, ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣವಾಗಿ ಮಳೆ ಬೀಳಲಿದ್ದು, ಉತ್ತರ ಒಳನಾಡಿನಲ್ಲಿ ಕೂಡ ಒಂದೆರಡು ಕಡೆಗಳಲ್ಲಿ ಮಳೆ ಬರಲಿದ್ದು, ಶುಕ್ರವಾರದಿಂದ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಇನ್ನೂ, ಉಡುಪಿ, ಕೊಡಗು, ಚಿಕ್ಕಬಳ್ಳಾಪುರ, ಕೋಲಾರ, ಹಾಸನ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆ ದಾಖಲಾಗಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.
