Home » Karnataka SSLC Result 2023: ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಈ ದಿನದಂದು ಪ್ರಕಟ ಸಾಧ್ಯತೆ!

Karnataka SSLC Result 2023: ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಈ ದಿನದಂದು ಪ್ರಕಟ ಸಾಧ್ಯತೆ!

0 comments
Karnataka SSLC Result 2023

Karnataka SSLC Result 2023 : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ನಿನ್ನೆ ಅಂದರೆ ದಿನಾಂಕ 21 ರಂದು ಬಿಡುಗಡೆಯಾಗಿದ್ದು, ಸದ್ಯ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶಕ್ಕಾಗಿ (Karnataka SSLC Result 2023) ವಿದ್ಯಾರ್ಥಿಗಳು ಮತ್ತು ಪೋಷಕರು ಕುತೂಹಲದಿಂದ ಕಾಯುತ್ತಿದ್ದಾರೆ. ಮಾಹಿತಿ ಪ್ರಕಾರ ಸದ್ಯ ಮೇ ಎರಡನೇ ವಾರದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ.

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಹಿನ್ನೆಲೆ ಶೀಘ್ರ ಅಧಿಕೃತ ಪ್ರಕಟಣೆ ಹೊರಡಿಸಲಾಗುತ್ತದೆ ಎಂದು ಮಂಡಳಿ ಅಧ್ಯಕ್ಷ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರನ್ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ್ದಾರೆ. ಮುಖ್ಯವಾಗಿ SSLC ಫಲಿತಾಂಶವನ್ನು ಇಲಾಖೆಯ ಅಧಿಕೃತ ವೆಬ್ ಸೈಟ್ ಗಳಲ್ಲಿ ಪ್ರಕಟಿಸಲಾಗುವುದು. ವಿದ್ಯಾರ್ಥಿಗಳು karresults.nic.in ಮತ್ತು kseab.karnataka.gov.in. ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.

ಅಧಿಕೃತ ವೆಬ್ ಸೈಟ್ karresults.nic.in ಹೋಗಿ, ಮುಖಪುಟದಲ್ಲಿ, ಕರ್ನಾಟಕ SSLC 2023 ಫಲಿತಾಂಶ ಲಿಂಕ್ ನಲ್ಲಿ ಹೊಸ ಲಾಗಿನ್ ಪುಟ ತೆರೆಯುತ್ತದೆ, ನಂತರ ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ವಿವರಗಳನ್ನು ಸಲ್ಲಿಸಿದರೆ ಫಲಿತಾಂಶ ವೀಕ್ಷಣೆ ಮಾಡಬಹುದಾಗಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಏಳು ನಾಯಿಗಳ ದಾಳಿಯಿಂದ ಗೆದ್ದು ಬಂದ ಬಾಲಕ!

You may also like

Leave a Comment